ಸೆನ್ಸೆಕ್ಸ್: ಭರ್ಜರಿ ಚೇತರಿಕೆ ಕಂಡ ಶೇರುಪೇಟೆ ಸೂಚ್ಯಂಕ

ಬುಧವಾರ, 25 ಮೇ 2016 (11:53 IST)
ಸಾಗರೋತ್ತರ ಮಾರುಕಟ್ಟೆಗಳ ಚೇತರಿಕೆಯ ವಹಿವಾಟಿನಿಂದಾಗಿ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 305 ಪಾಯಿಂಟ್‌ಗಳ ಏರಿಕೆ ಕಂಡಿದೆ.
 
ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 75,11 ಪಾಯಿಂಟ್‌ಗಳ ಏರಿಕೆ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 304.86 ಪಾಯಿಂಟ್‌ಗಳ ಏರಿಕೆ ಕಂಡು 25,610.33 ಅಂಕಗಳಿಗೆ ತಲುಪಿದೆ. 
 
ಮಾಹಿತಿ ತಂತ್ರಜ್ಞಾನ, ರಿಯಲ್ಟಿ ಮತ್ತು ಬ್ಯಾಂಕಿಂಗ್ ಕ್ಷೇತ್ರಗಳ ಶೇರುಗಳು ವಹಿವಾಟಿನಲ್ಲಿ ಶೇ.1.62 ರಷ್ಟು ಚೇತರಿಕೆ ಕಂಡಿವೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 98.10 ಪಾಯಿಂಟ್‌ಗಳ ಏರಿಕೆ ಕಂಡು 7,846.85 ಅಂಕಗಳಿಗೆ ತಲುಪಿದೆ. 
 
ಜಾಗತಿಕ ಮಾರುಕಟ್ಟೆಗಳ ಚೇತರಿಕೆಯ ವಹಿವಾಟಿನಿಂದಾಗಿ ಹೂಡಿಕೆದಾರರು ಶೇರುಗಳ ಖರೀದಿಗೆ ಆಸಕ್ತಿ ತೋರಿದ್ದರಿಂದ ಶೇರುಪೇಟೆ ಸೂಚ್ಯಂಕ ಇಂದಿನ ವಹಿವಾಟಿನಲ್ಲಿ ಚೇತರಿಕೆ ಕಂಡಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.
 
ಜಪಾನ್‌ನ ನಿಕೈ ಶೇರುಪೇಟೆ ಸೂಚ್ಯಂಕ ಶೇ.1.80 ರಷ್ಟು ಏರಿಕೆ ಕಂಡಿದ್ದರೆ, ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಸೂಚ್ಯಂಕ ಶೇ.2.44 ರಷ್ಟು ಏರಿಕೆ ಕಂಡಿದೆ. ಶಾಂಘೈ ಸೂಚ್ಯಂಕ ಶೇ.0.24 ರಷ್ಟು ಏರಿಕೆ ಕಂಡಿದೆ.
 
ಅಮೆರಿಕದ ಡೊ ಜೊನ್ಸ್ ಶೇರುಪೇಟೆ ನಿನ್ನೆಯ ವಹಿವಾಟಿನ ಮುಕ್ತಾಯಕ್ಕೆ ಶೇ.1.22 ರಷ್ಟು ಏರಿಕೆ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.


ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ವೆಬ್ದುನಿಯಾವನ್ನು ಓದಿ