ಏಷ್ಯಾ ಮಾರುಕಟ್ಟೆಗಳ ದುರ್ಬಲ ವಹಿವಾಟು: ಕುಸಿದ ಶೇರುಸೂಚ್ಯಂಕ

ಸೋಮವಾರ, 31 ಆಗಸ್ಟ್ 2015 (16:32 IST)
ಏಷ್ಯಾ ಮಾರುಕಟ್ಟೆಗಳ ದುರ್ಬಲ ವಹಿವಾಟಿನಿಂದಾಗಿ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 147 ಪಾಯಿಂಟ್‌ಗಳ ಕುಸಿತ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ. 
 
ಕಳೆದ ಎರಡು ದಿನಗಳ ವಹಿವಾಟಿನಲ್ಲಿ 677.72 ಪಾಯಿಂಟ್‌ಗಳ ಏರಿಕೆ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 147.29 ಪಾಯಿಂಟ್‌ಗಳ ಕುಸಿತ ಕಂಡು 26,245.09 ಅಂಕಗಳಿಗೆ ತಲುಪಿದೆ.
 
ಉಕ್ಕು, ವಿದ್ಯುತ್, ರಿಯಲ್ಟಿ, ಪಿಎಸ್‌ಯು, ಬ್ಯಾಂಕ್, ಬಂಡವಾಳ ವಸ್ತುಗಳು ಮತ್ತು ವಾಹನೋದ್ಯಮ ಕ್ಷೇತ್ರದ ಶೇರುಗಳು ಲಾಭದಾಯಕ ವಹಿವಾಟಿನಿಂದ ಕುಸಿತ ಕಂಡಿವೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.  
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 40.90 ಪಾಯಿಂಟ್‌ಗಳ ಕುಸಿತ ಕಂಡು 7,961.05 ಅಂಕಗಳಿಗೆ ತಲುಪಿದೆ.
 
ಜಪಾನ್‌ನ ನಿಕೈ ಶೇರುಪೇಟೆ ಶೇ.1.05 ಪಾಯಿಂಟ್‌ಗಳ ಕುಸಿತ ಕಂಡಿದೆ. ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಸೂಚ್ಯಂಕ ಶೇ.0.47 ರಷ್ಟು ಇಳಿಕೆಯಾಗಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ವೆಬ್ದುನಿಯಾವನ್ನು ಓದಿ