ಆರ್‌ಬಿಐ ಪರಿಷ್ಕರಣ ಸಭೆ: 55 ಪಾಯಿಂಟ್‌ಗಳ ಕುಸಿತ ಕಂಡ ಶೇರುಸೂಚ್ಯಂಕ

ಮಂಗಳವಾರ, 9 ಆಗಸ್ಟ್ 2016 (12:51 IST)
ಭಾರತೀಯ ರಿಸರ್ವ್ ಬ್ಯಾಂಕ್ ಆರ್ಥಿಕ ಪರಿಷ್ಕರಣೆ ಮುಂದಿವರುವಂತೆಯೇ ಹೂಡಿಕೆದಾರರು ಕಾದು ನೋಡುವ ತಂತ್ರ ಅನುಸರಿಸಿದ್ದರಿಂದ ಶೇರುಪೇಟೆ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 55 ಪಾಯಿಂಟ್‌ಗಳ ಕುಸಿತ ಕಂಡಿದೆ. 
 
ಕಳೆದ ಮೂರು ದಿನಗಳ ವಹಿವಾಟಿನ ಮುಕ್ತಾಯಕ್ಕೆ 485.06 ಪಾಯಿಂಟ್‌ಗಳ ಏರಿಕೆ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 55.20 ಪಾಯಿಂಟ್‌ಗಳ ಕುಸಿತ ಕಂಡು 28,127.37 ಅಂಕಗಳಿಗೆ ತಲುಪಿದೆ.  
 
ಎಫ್ಎಂಸಿಜಿ, ತಂತ್ರಜ್ಞಾನ, ಐಟಿ, ರಿಯಲ್ಟಿ ಮತ್ತು ಬಂಡವಾಳ ವಸ್ತುಗಳ ಕ್ಷೇತ್ರಗಳ ಶೇರುಗಳು ವಹಿವಾಟಿನಲ್ಲಿ ಕುಸಿತ ಕಂಡಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 19.45 ಪಾಯಿಂಟ್‌ಗಳ ಏರಿಕೆ ಕಂಡು 8,691.90 ಅಂಕಗಳಿಗೆ ತಲುಪಿದೆ.  
 
ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಸೂಚ್ಯಂಕ ಶೇ.0.16 ರಷ್ಟು ಕುಸಿತ ಕಂಡಿದ್ದರೆ, ಜಪಾನ್‌ನ ನಿಕೈ ಸೂಚ್ಯಂಕ ಕೂಡಾ ಶೇ.0.11 ರಷ್ಟು ಚೇತರಿಕೆ ಕಂಡಿದೆ.
 
ಆಮೆರಿಕದ ಡೊ ಜೊನ್ಸ್ ಶೇರುಪೇಟೆ ಸೂಚ್ಯಂಕ ನಿನ್ನೆಯ ವಹಿವಾಟಿನ ಮುಕ್ತಾಯಕ್ಕೆ ಶೇ.0.08 ರಷ್ಟು ಕುಸಿತ ಕಂಡಿದೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ