ಮಾಸಾಂತ್ಯದಿಂದಾಗಿ ಕುಸಿತ ಕಂಡ ಶೇರುಪೇಟೆ ಸೂಚ್ಯಂಕ

ಗುರುವಾರ, 28 ಜನವರಿ 2016 (14:55 IST)
ಮಾಸಾಂತ್ಯ ಮತ್ತು ಏಷ್ಯಾ ಶೇರುಪೇಟೆಗಳ ದುರ್ಬಲ ವಹಿವಾಟಿನಿಂದಾಗಿ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 92 ಪಾಯಿಂಟ್‌ಗಳ ಕುಸಿತ ಕಂಡಿದೆ.
 
ವಿದೇಶಿ ವಿನಿಮಯ ಮಾರುಕಟ್ಟೆಯಲ್ಲಿ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 14 ಪೈಸೆ ಕುಸಿತವಾಗಿರುವುದು ಕೂಡಾ ಶೇರುಪೇಟೆ ಇಳಿಕೆಗೆ ಕಾರಣವಾಗಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
 
ಕಳೆದ ಮೂರು ದಿನಗಳ ವಹಿವಾಟಿನ ಮುಕ್ತಾಯಕ್ಕೆ 530.18 ಪಾಯಿಂಟ್‌ಗಳ ಕುಸಿತ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 91.87 ಪಾಯಿಂಟ್‌ಗಳ ಏರಿಕೆಯಾಗಿ 24,400.52 ಅಂಕಗಳಿಗೆ ತಲುಪಿದೆ.
 
ಭಾರ್ತಿ ಏರ್‌ಟೆಲ್, ಎಚ್‌ಡಿಎಫ್‌ಸಿ ಲಿಮಿಟೆಡ್, ಟಾಟಾ ಸ್ಟೀಲ್, ಮಾರುತಿ ಸುಜುಕಿ, ಬಜಾಜ್ ಅಟೋ, ಏಷ್ಯನ್ ಪೇಂಟ್ಸ್, ಎಸ್‌ಬಿಐ, ಎಲ್‌ಆಂಡ್‌ಟಿ, ಐಸಿಐಸಿಐ ಶೇರುಗಳು ವಹಿವಾಟಿನಲ್ಲಿ ಕುಸಿತ ಕಂಡಿವೆ. 
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 28.15 ಪಾಯಿಂಟ್‌ಗಳ ಇಳಿಕೆ ಕಂಡು 7,409.60 ಅಂಕಗಳಿಗೆ ತಲುಪಿದೆ.  
 
ಶಾಂಘೈ ಶೇರುಪೇಟೆ ಶೇ.0.51 ರಷ್ಟು ಕುಸಿತ ಕಂಡಿದ್ದರೆ, ಜಪಾನ್‌ನ ನಿಕೈ ಶೇರುಪೇಟೆ ಸೂಚ್ಯಂಕ ಶೇ.0.04 ರಷ್ಟು ಏರಿಕೆ ಕಂಡಿದೆ.ಆದರೆ, ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಸೂಚ್ಯಂಕ ಚೇತರಿಕೆ ಕಂಡಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ