ಸೆನ್ಸೆಕ್ಸ್: ಪಾತಾಳಕ್ಕೆ ಕುಸಿದ ಶೇರುಪೇಟೆ ಸೂಚ್ಯಂಕ

ಸೋಮವಾರ, 27 ಜುಲೈ 2015 (14:46 IST)
ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 437 ಪಾಯಿಂಟ್‌ಗಳ ಕುಸಿತ ಕಂಡಿದೆ ಎದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
 
ಚೀನಾ ಶೇರುಪೇಟೆ ಕಠಿಣ ನೀತಿಗಳನ್ನು ಜಾರಿಗೊಳಿಸಲು ನಿರ್ಧರಿಸಿದ್ದರಿಂದ  ದೇಶಿಯ ಶೇರುಪೇಟೆಯ ಮೇಲೆ ಪ್ರಭಾವ ಬೀರುವ ಕಳವಳದಿಂದಾಗಿ ಹೂಡಿಕೆದಾರರು ಶೇರುಗಳ ಖರೀದಿಗೆ ನಿರಾಸಕ್ತಿ ತೋರಿದ್ದಾರೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.
 
ಶೇರುಗಳ ಖರೀದಿದಾರರಿಗಾಗಿ ಕಠಿಣ ನೀತಿಗಳ ಜಾರಿಗೆ ಕೇಂದ್ರ ಸರಕಾರ ಶಿಫಾರಸ್ಸು ಮಾಡುವುದಲ್ಲದೇ ಸುಪ್ರೀಂಕೋರ್ಟ್ ಮೇಲ್ವಿಚಾರಣೆಯಲ್ಲಿ ವಿಶೇಷ ತನಿಖಾ ತಂಡ ನೇಮಕಕ್ಕೆ ಗ್ರೀನ್ ಸಿಗ್ನಲ್ ನೀಡುತ್ತದೆಯೋ ಎನ್ನುವ ಆತಂಕ ಹೂಡಿಕೆದಾರರನ್ನು ಕಾಡುತ್ತಿದೆ.
 
ಬಿಎಸ್‌ಇ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 437.85 ಪಾಯಿಂಟ್‌ಗಳ ಏರಿಕೆ ಕಂಡು 27,674.46 ಅಂಕಗಳಿಗೆ ತಲುಪಿದೆ.
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 129.20 ಪಾಯಿಂಟ್‌ಗಳ ಇಳಿಕೆ ಕಂಡು  8,392.35 ಅಂಕಗಳಿಗೆ ತಲುಪಿದೆ.
 
ವಿದೇಶಿ ವಿನಿಯಮ ಮಾರುಕಟ್ಟೆಯಲ್ಲಿ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 7 ಪೈಸೆ ಕುಸಿತವಾಗಿರುವುದು ಕೂಡಾ ಶೇರುಪೇಟೆ ಸೂಚ್ಯಂಕ ಇಳಿಕೆಗೆ ಕಾರಣವಾಗಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ