ವಿದೇಶಿ ಬಂಡವಾಳ ಹರಿವು ಹೆಚ್ಚಳದಿಂದ ಸೂಚ್ಯಂಕ ಚೇತರಿಕೆ

ಶುಕ್ರವಾರ, 22 ಆಗಸ್ಟ್ 2014 (13:23 IST)
ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳವಾದ ಹಿನ್ನೆಲೆಯಲ್ಲಿ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ ಭರ್ಜರಿ 111 ಪಾಯಿಂಟ್‌ಗಳ ಏರಿಕೆ ಕಂಡಿದೆ.
 
ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 45.62 ಪಾಯಿಂಟ್‌ಗಳ ಏರಿಕೆ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ ಮತ್ತೆ 111 ಪಾಯಿಂಟ್‌ಗಳ ಚೇತರಿಕೆ ಕಂಡು 26,471.20 ಅಂಕಗಳಿಗೆ ತಲುಪಿದೆ. 
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 33.80 ಪಾಯಿಂಟ್‌ಗಳ ಏರಿಕೆಯಾಗಿ 7924.90 ಅಂಕಗಳಿಗೆ ತಲುಪಿದೆ.  
 
ಜಪಾನ್‌ನ ನಿಕೈ ಮಾರುಕಟ್ಟೆ ನಿಕೈ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇ.0. 20 ಪಾಯಿಂಟ್‌ಗಳ ಏರಿಕೆಯಾಗಿದೆ.ಹಾಂಗ್‌ಕಾಂಗ್‌ನ ಹಾಂಗ‌್‌ಸೆಂಗ್ ಮಾರುಕಟ್ಟೆ ಸೂಚ್ಯಂಕ ಕೂಡಾ ಶೇ.0.24 ರಷ್ಟು ಏರಿಕೆ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
 
 

ವೆಬ್ದುನಿಯಾವನ್ನು ಓದಿ