ಕಳೆದ ಮೂರು ದಿನಗಳ ವಹಿವಾಟಿನ ಮುಕ್ತಾಯಕ್ಕೆ 669.92 ಪಾಯಿಂಟ್‌ಗಳ ಚೇತರಿಕೆ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 66.36 ಪಾಯಿಂಟ್‌ಗಳ ಕುಸಿತ ಕಂಡು 28,518.53 ಅಂಕಗಳಿಗೆ ತಲುಪಿದೆ.
ಅದರಂತೆ, ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 25.55 ಪಾಯಿಂಟ್‌ಗಳ ಏರಿಕೆ ಕಂಡು 8,811.75 ಅಂಕಗಳಿಗೆ ತಲುಪಿದೆ.
ಜಪಾನ್‌ನ ನಿಕೈ ಶೇರುಪೇಟೆ ಸೂಚ್ಯಂಕ ಶೇ.0.13 ರಷ್ಟು ಏರಿಕೆ ಕಂಡಿದ್ದರೆ, ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಸೂಚ್ಯಂಕ ಶೇ.0.27 ರಷ್ಟು ಚೇತರಿಕೆ ಕಂಡಿದೆ. ಶಾಂಘೈ ಶೇರುಪೇಟೆ ಸೂಚ್ಯಂಕ ಶೇ,0.16 ರಷ್ಟು ಕುಸಿತ ಕಂಡಿದೆ.