ಸೆನ್ಸೆಕ್ಸ್: ಸತತ ಒಂಬತ್ತನೇ ದಿನವೂ ಚೇತರಿಕೆ ಕಂಡ ಶೇರುಸೂಚ್ಯಂಕ

ಬುಧವಾರ, 24 ಜೂನ್ 2015 (12:31 IST)
ಶೇರುಪೇಟೆಯ ವಹಿವಾಟು ಸತತ ಒಂಬತ್ತನೇ ದಿನವೂ ಚೇತರಿಕೆ ಕಂಡಿದೆ. ಇಂದಿನ ಆರಂಭಿಕ ವಹಿವಾಟಿನಲ್ಲಿ ಸಂವೇದಿ ಸೂಚ್ಯಂಕ 72 ಪಾಯಿಂಟ್‌ಗಳಷ್ಟು ಏರಿಕೆಯಾಗಿದೆ.
 
ಜಾಗತಿಕ ಮಾರುಕಟ್ಟೆಗಳ ಚೇತರಿಕೆಯ ವಹಿವಾಟಿನಿಂದಾಗಿ ದೇಶಿಯ ಶೇರುಪೇಟೆಯ ವಹಿವಾಟಿನ ಮೇಲೆ ಧನಾತ್ಮಕ ಪ್ರಭಾವ ಬೀರಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.   
 
ಕಳೆದ ಎಂಟು ದಿನಗಳ ವಹಿವಾಟಿನಲ್ಲಿ 1433.39 ಪಾಯಿಂಟ್‌ಗಳ ಚೇತರಿಕೆ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ ಮತ್ತೆ 72 ಪಾಯಿಂಟ್‌ಗಳ ಏರಿಕೆ ಕಂಡು 27,876.85 ಅಂಕಗಳಿಗೆ ತಲುಪಿದೆ.
 
ಉಕ್ಕು, ಹೆಲ್ತ್‌ಕೇರ್, ಸಾರ್ವಜನಿಕ ಕ್ಷೇತ್ರದ ಕಂಪೆನಿಗಳು ಮತ್ತು ವಿದ್ಯುತ್ ಕ್ಷೇತ್ರದ ಶೇರುಗಳು ಖರೀದಿಗೆ ಹೂಡಿಕೆದಾರರು ಆಸಕ್ತಿ ತೋರಿದ್ದಾರೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 18.30 ಪಾಯಿಂಟ್‌ಗಳ ಏರಿಕೆ ಕಂಡು 8399.85 ಅಂಕಗಳಿಗೆ ತಲುಪಿದೆ.
 
ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಸೂಚ್ಯಂಕ ಶೇ.0.15 ರಷ್ಟು ಏರಿಕೆ ಕಂಡಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.
 

ವೆಬ್ದುನಿಯಾವನ್ನು ಓದಿ