ಸೆನ್ಸೆಕ್ಸ್: 85 ಪಾಯಿಂಟ್‌ಗಳ ಚೇತರಿಕೆ ಕಂಡ ಶೇರುಪೇಟೆ ಸೂಚ್ಯಂಕ

ಶುಕ್ರವಾರ, 26 ಆಗಸ್ಟ್ 2016 (11:55 IST)
ಏಷ್ಯಾ ಮಾರುಕಟ್ಟೆಗಳ ಭರ್ಜರಿ ವಹಿವಾಟು ಮತ್ತು ಹೂಡಿಕೆದಾರರು ಶೇರುಗಳ ಖರೀದಿಗೆ ನಿರಾಸಕ್ತಿ ತೋರಿದ್ದರಿಂದ ಶೇರುಪೇಟೆ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 85 ಪಾಯಿಂಟ್‌ಗಳ ಏರಿಕೆ ಕಂಡಿದೆ. 
 
ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 224.03 ಪಾಯಿಂಟ್‌ಗಳ ಕುಸಿತ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 84.81 ಪಾಯಿಂಟ್‌ಗಳ ಏರಿಕೆ ಕಂಡು 27,920.72 ಅಂಕಗಳಿಗೆ ತಲುಪಿದೆ. 
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 24.60 ಪಾಯಿಂಟ್‌ಗಳ ಚೇತರಿಕೆ ಕಂಡು  8,616.80 ಅಂಕಗಳಿಗೆ ತಲುಪಿದೆ. 
 
ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಸೂಚ್ಯಂಕ ಶೇ.0.57 ರಷ್ಟು ಏರಿಕೆ ಕಂಡಿದ್ದರೆ. ಶಾಂಘೈ ಶೇರುಪೇಟೆ ಸೂಚ್ಯಂಕ ಶೇ.0.60 ರಷ್ಟು ಏರಿಕೆಯಾಗಿದೆ. ಜಪಾನ್‌ನ ನಿಕೈ ಶೇರುಪೇಟೆ ಸೂಚ್ಯಂಕ ಶೇ.0.65 ರಷ್ಟು ಏರಿಕೆಯಾಗಿದೆ.
 
ಅಮೆರಿಕದ ಡೊ ಜೊನ್ಸ್ ಶೇರುಪೇಟೆ ಸೂಚ್ಯಂಕ ಕೂಡಾ ನಿನ್ನೆಯ ವಹಿವಾಟಿನ ಮುಕ್ತಾಯಕ್ಕೆ ಶೇ.0.18 ರಷ್ಟು ಕುಸಿತ ಕಂಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

ವೆಬ್ದುನಿಯಾವನ್ನು ಓದಿ