ಸೆನ್ಸೆಕ್ಸ್: 184 ಪಾಯಿಂಟ್‌ಗಳ ಭರ್ಜರಿ ಚೇತರಿಕೆ ಕಂಡ ಶೇರುಸಂವೇದಿ ಸೂಚ್ಯಂಕ

ಗುರುವಾರ, 28 ಜುಲೈ 2016 (18:32 IST)
ಬಹನಿರೀಕ್ಷಿತ ಜಿಎಸ್‌ಟಿ ಮಸೂದೆ ಸಂಸತ್ತಿನಲ್ಲಿ ಅಂಗೀಕಾರವಾಗುವ ನಿರೀಕ್ಷೆಗಳ ಹಿನ್ನೆಲೆಯಲ್ಲಿ ಶೇರುಪೇಟೆಯ ಸೂಚ್ಯಂಕ ಇಂದಿನ ವಹಿವಾಟಿನ ಮುಕ್ತಾಯಕ್ಕೆ 184 ಪಾಯಿಂಟ್‌ಗಳ ಚೇತರಿಕೆ ಕಂಡಿದೆ.
 
ಕೇಂದ್ರದ ಸಚಿವ ಸಂಪುಟ ಸಂವಿಧಾನ ತಿದ್ದುಪಡಿ ಮಸೂದೆಯಲ್ಲಿ ಕೆಲ ಬದಲಾವಣೆಗಳನ್ನು ಮಾಡಿದ ಹಿನ್ನೆಲೆಯಲ್ಲಿ ಮುಂಗಾರು ಅಧಿವೇಶನದಲ್ಲಿಯೇ ಜಿಎಸ್‌ಟಿ ಮಸೂದೆ ಅಂಗೀಕಾರವಾಗಲಿದೆ ಎನ್ನುವ ಹೊಸ ಆಶಾಭಾವನೆ ಹೂಡಿಕೆದಾರರಲ್ಲಿ ಮೂಡಿದೆ ಎಂದು ಮೂಲಗಳು ತಿಳಿಸಿವೆ.
 
ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 47.81 ಪಾಯಿಂಟ್‌ಗಳ ಏರಿಕೆ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ವಹಿವಾಟಿನ ಮುಕ್ತಾಯಕ್ಕೆ 184.29 ಪಾಯಿಂಟ್‌ಗಳ ಏರಿಕೆ ಕಂಡು 28,208.62 ಅಂಕಗಳಿಗೆ ತಲುಪಿದೆ.
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ವಹಿವಾಟಿನ ಮುಕ್ತಾಯಕ್ಕೆ 50.50 ಪಾಯಿಂಟ್‌ಗಳ ಭರ್ಜರಿ ಚೇತರಿಕೆ ಕಂಡು 8,666.30 ಅಂಕಗಳಿಗೆ ತಲುಪಿದೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ