ಸೆನ್ಸೆಕ್ಸ್: 145 ಪಾಯಿಂಟ್‌ಗಳ ಚೇತರಿಕೆ ಕಂಡ ಶೇರುಸಂವೇದಿ ಸೂಚ್ಯಂಕ

ಸೋಮವಾರ, 18 ಜುಲೈ 2016 (12:25 IST)
ವಿದೇಶಿ ಬಂಡವಾಳ ಹೂಡಿಕೆ ಒಳಹರಿವು ಹೆಚ್ಚಳದ ನಡುವೆ ಚಿಲ್ಲರೆ ಹೂಡಿಕೆದಾರರು ಶೇರುಗಳ ಖರೀದಿಗೆ ಮುಂದಾಗಿದ್ದರಿಂದ ಶೇರುಪೇಟೆ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 145 ಪಾಯಿಂಟ್‌ಗಳ ಚೇತರಿಕೆ ಕಂಡಿದೆ.
 
ಉತ್ತಮ ಮುಂಗಾರು ಮತ್ತು ಏಷ್ಯಾ ಮಾರುಕಟ್ಟೆಗಳ ಚೇತರಿಕೆಯ ವಹಿವಾಟಿನಿಂದಾಗಿ ಶೇರುಪೇಟೆ ಸೂಚ್ಯಂಕ ಚೇತರಿಕೆ ಕಂಡಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ. 
 
ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 105.61 ಪಾಯಿಂಟ್‌ಗಳ ಕುಸಿತ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 146.93 ಪಾಯಿಂಟ್‌ಗಳ ಏರಿಕೆ ಕಂಡು 27,983.43 ಪಾಯಿಂಟ್‌ಗಳ ಏರಿಕೆ ಕಂಡಿದೆ.
 
ವಾಹನೋದ್ಯಮ, ಬಂಡವಾಳ ವಸ್ತುಗಳು, ಬ್ಯಾಂಕಿಂಗ್, ವಿದ್ಯುತ್, ರಿಯಲ್ಟಿ, ತೈಲ ಮತ್ತು ಅನಿಲ ಹಾಗೂ ಉಕ್ಕು ಶೇರುಗಳು ವಹಿವಾಟಿನಲ್ಲಿ ಚೇತರಿಕೆ ಕಂಡಿವೆ.
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 38.90 ಪಾಯಿಂಟ್‌ಗಳ ಏರಿಕೆ ಕಂಡು 8,580.30 ಅಂಕಗಳಿಗೆ ತಲುಪಿದೆ. 
 
ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಸೂಚ್ಯಂಕ ಶೇ.0.16 ರಷ್ಟು ಏರಿಕೆ ಕಂಡಿದ್ದರೆ, ಜಪಾನ್‌ ಶೇರುಪೇಟೆಗೆ ರಜೆ ಘೋಷಿಸಲಾಗಿದೆ. ಆದರೆ, ಶಾಂಘೈ ಶೇರುಪೇಟೆ ಸೂಚ್ಯಂಕ ಶೇ.0.11 ರಷ್ಟು ಕುಸಿತ ಕಂಡಿದೆ.
 
ಅಮೆರಿಕದ ಡೊ ಜೊನ್ಸ್ ಶೇರುಪೇಟೆ ಸೂಚ್ಯಂಕ ನಿನ್ನೆಯ ವಹಿವಾಟಿನ ಮುಕ್ತಾಯಕ್ಕೆ ಷೇ.0.05 ರಷ್ಟು ಏರಿಕೆ ಕಂಡಿದೆ.

 
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ