ತದನಂತರ ಕೆಲವೇ ದಿನಗಳಲ್ಲಿ ಪಾಕಿಸ್ತಾನದ ಬಣ್ಣ ಬಯಲಾಯಿತು. ಪಾಕಿಸ್ತಾನದ ಸೈನಿಕರು ಕಾರ್ಗಿಲ್‌ನಲ್ಲಿ ಗುಂಡಿನ ಸುರಿಮಳೆಗೈಯುತ್ತಿರುವುದು ಕಂಡು ಬಂದಿತು.ಪಾಕಿಸ್ತಾನದ ಕೂಟ ನೀತಿಯಿಂದ ಶಾಕ್ ಗೊಂಡ ಭಾರತೀಯ ಸೇನೆ, ಕಾರ್ಗಿಲ್‌ಗೆ ನುಗ್ಗಿ ಪಾಕಿಸ್ತಾನ ಸೇನೆಯನ್ನು ಸದೆಬಡೆಯಿತು.
ಪಾಕಿಸ್ತಾನದ ಪಡೆಗಳು ಮತ್ತು ಉಗ್ರಗಾಮಿಗಳು ಗಡಿಯಲ್ಲಿ ಆಕ್ರಮಿಸಿಕೊಂಡ ಭಾರತದ ಬಹುತೇಕ ನೆಲೆಗಳನ್ನು ಬಳಿಕ ಭಾರತದ ಸೇನೆಯು ಭಾರತೀಯ ವಾಯು ಪಡೆಯ ಬೆಂಬಲದೊಂದಿಗೆ ಮರುವಶಕ್ಕೆ ತೆಗೆದುಕೊಂಡಿತು. ಅಂತಾರಾಷ್ಟ್ರೀಯವಾಗಿ ರಾಜತಾಂತ್ರಿಕ ವಿರೋಧ ವ್ಯಕ್ತವಾಗಿದ್ದರಿಂದಾಗಿ, ಪಾಕಿಸ್ತಾನದ ಪಡೆಗಳು ಗಡಿಯ ಭಾರತದ ನೆಲೆಗಳಿಂದ ಬಲವಂತವಾಗಿ ಹಿಂದಕ್ಕೆ ಸರಿಯಬೇಕಾಯಿತು.