ಏಷ್ಯನ್ ಗೇಮ್ಸ್: ಬೆನ್ನುನೋವಿನಿಂದಾಗಿ ಚೇತನ್ ಆನಂದ್ ಅಲಭ್ಯ

ಶನಿವಾರ, 30 ಅಕ್ಟೋಬರ್ 2010 (15:48 IST)
ಡೆನ್ಮಾರ್ಕ್ ಸೂಪರ್ ಸಿರೀಸ್ ಬ್ಯಾಡ್ಮಿಂಟನ್ ಪಂದ್ಯಾವಳಿಯ ಮೊದಲ ಸುತ್ತಿನಲ್ಲಿ ಸೋಲನುಭವಿಸಿ ನಿರ್ಗಮಿಸಿದ ಅಗ್ರಶ್ರೇಯಾಂಕಿತ ಆಟಗಾರ ಚೇತನ್ ಆನಂದ್,ಮುಂಬರುವ ಏಷ್ಯನ್ ಗೇಮ್ಸ್ ಪಂದ್ಯಾವಳಿಯಲ್ಲಿ ಭಾಗವಹಿಸಲು ಸಾಧ್ಯವಾಗುವುದಿಲ್ಲ ಎಂದು ಹೇಳಿಕೆ ನೀಡಿದ್ದಾರೆ.

ಬ್ಯಾಡ್ಮಿಂಟನ್ ಅಸೋಸಿಯೇಶನ್ ಆಫ್ ಇಂಡಿಯಾದ ಅಧ್ಯಕ್ಷ ವಿ.ಕೆ .ವರ್ಮಾ ಮತ್ತು ಮುಖ್ಯ ಕೋಚ್ ಪುಲ್ಲೇಲ ಗೋಪಿಚಂದ್ ಅವರಿಗೆ ಚೇತನ್ ಆನಂದ್, ಇ-ಮೇಲ್ ಸಂದೇಶವನ್ನು ರವಾನಿಸಿ ಏಷ್ಯನ್ ಗೇಮ್ಸ್ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಅಸಹಾಯಕತೆಯನ್ನು ವ್ಯಕ್ತಪಡಿಸಿದ್ದಾರೆ.

ವಿಶ್ವ ಬ್ಯಾಡ್ಮಿಂಟನ್ ಶ್ರೇಯಾಂಕದಲ್ಲಿ 20ನೇ ಸ್ಥಾನದಲ್ಲಿರುವ ಚೇತನ್, ಡೆನ್ಮಾರ್ಕ್ ಸೂಪರ್ ಸರಣಿ ಪಂದ್ಯಾವಳಿಯಲ್ಲಿ ಬೆನ್ನು ನೋವು ಉಲ್ಬಣಗೊಂಡಿದ್ದರಿಂದ,ವೈದ್ಯರು ವಿಶ್ರಾಂತಿ ಪಡೆಯುವಂತೆ ಸಲಹೆ ನೀಡಿದ್ದಾರೆ ಎಂದು ಇ-ಮೇಲ್‌ನಲ್ಲಿ ಸಂದೇಶ ರವಾನಿಸಿದ್ದಾರೆ.

ಚೇತನ್ ಅನುಪಸ್ಥಿತಿಯಿಂದಾಗಿ ಭಾರತದ ಬ್ಯಾಡ್ಮಿಂಟನ್ ತಂಡದ ಮೇಲೆ ಋಣಾತ್ಮಕ ಪ್ರಭಾವ ಬೀರಲಿದೆ.ಕಾಮನ್‌ವೆಲ್ತ್ ಗೇಮ್ಸ್‌ಗೆ ಮುಂಚೆ,ದೇಶಧ ಅತ್ಯುತ್ತಮ ಬ್ಯಾಡ್ಮಿಂಟನ್ ಆಟಗಾರ ಎನ್ನುವ ಖ್ಯಾತಿ ಪಡೆದಿದ್ದ ಚೇತನ್, ದೈಹಿಕ ಹಾಗೂ ವೈಯಕ್ತಿಕ ಸಮಸ್ಯೆಗಳಿಂದಾಗಿ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲವಾಗಿದ್ದಾರೆ.

ವೆಬ್ದುನಿಯಾವನ್ನು ಓದಿ