ಪಾಕಿಸ್ತಾನದ ಜೊತೆಗೆ ಕ್ರಿಕೆಟ್ ಅಸಾಧ್ಯ– ಸುಷ್ಮಾ

ಸೋಮವಾರ, 1 ಜನವರಿ 2018 (17:40 IST)
ಕದನ ವಿರಾಮ ಉಲ್ಲಂಘಿಸುವ ಪಾಕಿಸ್ತಾನದ ಜೊತೆಗೆ ಕ್ರಿಕೆಟ್‌ ಸರಣಿ ನಡೆಸುವುದು ಅಸಾಧ್ಯ ಎಂದು ವಿದೇಶಾಂಗ ವ್ಯವಹಾರ ಸಚಿವೆ ಸುಷ್ಮಾ ಸ್ವರಾಜ್‌ ಹೇಳಿದ್ದಾರೆ.
 
ವಿದೇಶಾಂಗ ವ್ಯವಹಾರಗಳ ಸಮಾಲೋಚನಾ ಸಮಿತಿ ಸಭೆಯಲ್ಲಿ ಪಾಲ್ಗೊಂಡ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಶ್ಮೀರದ ಗಡಿಯಲ್ಲಿ ಪದೇ ಪದೇ ಕದನ ವಿರಾಮ ಉಲ್ಲಂಘನೆ ಮಾಡಿ ಭಾರತೀಯ ಯೋಧರನ್ನು ಹತ್ಯೆ ಮಾಡುತ್ತಿರುವ ಪಾಕಿಸ್ತಾನದ ಭಯೋತ್ಪಾದನೆಗೆ ಅಂತ್ಯ ಹಾಡುವವರೆಗೂ ಆ ದೇಶದೊಂದಿಗೆ ಕ್ರಿಕೆಟ್‌ ಸರಣಿ ನಡೆಸುವುದಿಲ್ಲ ಎಂದಿದ್ದಾರೆ.
 
2017ರಲ್ಲಿ ಪಾಕಿಸ್ತಾನ 800 ಸಲ ಕದನ ವಿರಾಮ ಉಲ್ಲಂಘನೆ ಮಾಡಿರುವ ಪಾಕಿಸ್ತಾನ ಕುಲಭೂಷಣ್‌ ಯಾದವ್‌ ಅವರ ತಾಯಿ ಮತ್ತು ಪತ್ನಿ ಜೊತೆಗೆ ಅಸಭ್ಯವಾಗಿ ನಡೆದುಕೊಂಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ