ಮಹಿಳಾ ಚೆಸ್ ವಿಶ್ವಕಪ್ ಫೈನಲ್‌ಗೆ ದಿವ್ಯಾ ದೇಶಮುಖ್, ಕೋನೇರು ಹಂಪಿ: ಯಾರೇ ಗೆದ್ದರೂ ಭಾರತಕ್ಕೆ ಕಿರೀಟ
ಹಂಪಿ ಅವರು ಟೈಬ್ರೇಕ್‌ನಲ್ಲಿ ಚೀನಾದ ಲೀ ಟಿಂಗ್ಜಿ ಅವರನ್ನು ಕೊನೇರು ಹಂಪಿ ಸೋಲಿಸಿದ್ದರೆ, ದಿವ್ಯಾ ದೇಶ್ ಮುಖ್ ಅವರು ಚೀನಾದ ಮತ್ತೋರ್ವ ಪ್ರಬಲ ಎದುರಾಳಿ ತಾನ್ ಝೊಂಗಿ ಅವರನ್ನು ದಂಗುಬಡಿಸಿ ಚೊಚ್ಚಲ ಬಾರಿಗೆ ವಿಶ್ವ ಕಪ್ ಫೈನಲ್ ಪ್ರವೇಶಿಸಿದರು.
ವಿಶ್ವದ ಮಾಜಿ ನಂಬರ್ 2 ಹಂಪಿ ಮತ್ತೊಂದು ಪ್ರತಿಷ್ಟಿತ ಪ್ರಶಸ್ತಿ ಗೆಲ್ಲಲು ಎದುರು ನೋಡುತ್ತಿದ್ದರೆ, ಉದಯೋನ್ಮುಖ ಆಟಗಾರ್ತಿ ದಿವ್ಯಾ ದೇಶಮುಖ್ ವೃತ್ತಿಜೀವನದ ನಿರ್ಣಾಯಕ ಗೆಲುವಿನೊಂದಿಗೆ ತನ್ನ ಕನಸನ್ನು ನನಸು ಮಾಡಿಕೊಳ್ಳಲು ಎದುರು ನೋಡುತ್ತಿದ್ದಾರೆ.