ಒಲಿಂಪಿಕ್ಸ್ ನಲ್ಲಿ ಕ್ರಿಕೆಟ್ ಸೇರಿಸುವ ವಿಚಾರಕ್ಕೆ ಬಿಸಿಸಿಐ ವಿರೋಧ

ಸೋಮವಾರ, 31 ಜುಲೈ 2017 (15:45 IST)
ಚೆನ್ನೈ:ಒಲಿಂಪಿಕ್ಸ್ ನಲ್ಲಿ ಕ್ರಿಕೆಟ್ ಅನ್ನು ಸೇರಿಸಬೇಕು ಎಂಬ ಐಸಿಸಿ ಕನಸಿಗೆ ಬಿಸಿಸಿಐ ವಿರೋಧ ವ್ಯಕ್ತಪಡಿಸಿದೆ. 2024ರ ಒಲಿಂಪಿಕ್ಸ್ ಕ್ರೀಡೆ ಪ್ಯಾರಿಸ್ ನಲ್ಲಿ ನಡೆಯಲಿದ್ದು, ಈ ವೇಳೆ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಕ್ರಿಕೆಟ್ ಆಡಿಸಬೇಕು ಎನ್ನುವುದು ಐಸಿಸಿಯ ಮಹತ್ವಾಕಾಂಕ್ಷೆಯಾಗಿತ್ತು. 
 
ಆದರೆ  ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಕ್ರಿಕೆಟ್ ಸೇರಿಸಲು ವಿಶ್ವದ ಕ್ರಿಕೆಟ್ ಆಡುವ ಎಲ್ಲ ದೇಶಗಳ ಬೆಂಬಲ ಅತ್ಯಗತ್ಯವಾಗಿದ್ದು, ಈಗಾಗಲೇ ಬಹುತೇಕ ಪ್ರಮುಖ ಕ್ರಿಕೆಟ್ ದೇಶಗಳು ಒಪ್ಪಿಗೆ ನೀಡಿವೆ. ಆದರೆ ವಿಶ್ವ ಕ್ರಿಕೆಟ್ ನಲ್ಲಿ ತನ್ನ ಪ್ರಭಾವ  ಬೀರಿರುವ ಬಿಸಿಸಿಐ ಮಾತ್ರ ಇದಕ್ಕೆ ವಿರೋಧ ವ್ಯಕ್ತಪಡಿಸಿದೆ.
 
ವಿಶ್ವ ಕ್ರಿಕೆಟ್ ನಲ್ಲಿ ಯಾವುದೇ ಪ್ರಮುಖ ನಿರ್ಣಯ ಕೈಗೊಳ್ಳಲು ವಿಶ್ವದ ಶ್ರೀಮಂತ ಕ್ರಿಕೆಟ್ ಸಂಸ್ಥೆ ಬಿಸಿಸಿಐನ  ಪಾತ್ರ  ಪ್ರಮುಖವಾಗಿರುತ್ತದೆ. ಬಿಸಿಸಿಐ ಒಪ್ಪಿದೆ ಎಂದರೆ ಬಹುತೇಕ ಎಲ್ಲ ಕ್ರಿಕೆಟ್ ರಾಷ್ಟ್ರಗಳೂ ಕೂಡ ಒಪ್ಪಿಗೆ ನೀಡುತ್ತವೆ ಎಂಬುದು ಕ್ರಿಕೆಟ್ ತಜ್ಞರ ಅಭಿಪ್ರಾಯ. ಆದರೆ ಈ ವಿಚಾರಕ್ಕೆ ಬಿಸಿಸಿಐ ಮಾತ್ರ ತನ್ನ ವಿರೋಧ ವ್ಯಕ್ತಪಡಿಸುತ್ತಿರುವುದು ಐಸಿಸಿ ಆಸೆಗೆ ತಣ್ಣೀರೆರಚಿದಂತಾಗಿದೆ. 
 

ವೆಬ್ದುನಿಯಾವನ್ನು ಓದಿ