ಓವಲ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಗೆಲ್ಲಲು 358 ರನ್ ಗಳ ಕಠಿಣ ಗುರಿ ಪಡೆದಿದ್ದ ಇಂಗ್ಲೆಂಡ್ ತಂಡವನ್ನು ಎರಡನೇ ಇನಿಂಗ್ಸ್ ನಲ್ಲಿ 210 ರನ್ ಗಳಿಗೆ ಆಲೌಟ್ ಆಯಿತು. ಈ ಮೂಲಕ ಭಾರತ ಸರಣಿ ಸೋಲಿನ ಭೀತಿಯಿಂದ ಪಾರಾಗಿದ್ದು, ಸರಣಿ ಗೆಲುವಿನ ಅತ್ಯುತ್ತಮ ಅವಕಾಶ ಪಡೆದಿದೆ.
ಒಂದು ಹಂತದಲ್ಲಿ ವಿಕೆಟ್ ನಷ್ಟವಿಲ್ಲದೇ 100 ರನ್ ಗಳಿಸಿ ಗೆಲುವಿನ ಭರವಸೆ ಹೊಂದಿದ್ದ ಇಂಗ್ಲೆಂಡ್ ತಂಡ ಅಂತಿಮ ದಿನದಾಟ ಆರಂಭದಿಂದಲೇ ವಿಕೆಟ್ ಕಳೆದುಕೊಳ್ಳುತ್ತಾ ಸಾಗಿತು.
ಈ ಸರಣಿಯಲ್ಲಿ ಭಾರತ ಇನಿಂಗ್ಸ್ ಹಿನ್ನಡೆ ಹೊರತಾಗಿಯೂ ಎರಡು ಪಂದ್ಯಗಳಲ್ಲಿ ಗೆಲುವು ದಾಖಲಿಸಿ ಹೊಸ ದಾಖಲೆ ಬರೆದಿದೆ.
ಭಾರತದ ಉಮೇಶ್ ಯಾದವ್ 3 ವಿಕೆಟ್ ಪಡೆದರೆ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್ ಮತ್ತು ಜಸ್ ಪ್ರೀತ್ ಬುಮ್ರಾ ತಲಾ 2 ವಿಕೆಟ್ ಕಿತ್ತು ಭಾರತಕ್ಕೆ ರೋಚಕ ಗೆಲುವು ತಂದುಕೊಟ್ಟರು.