ಕಾಮನ್ ವೆಲ್ತ್ ಗೇಮ್ಸ್: ಮಹಿಳೆಯರ ಬಾಕ್ಸಿಂಗ್ ನಲ್ಲಿ ಚಿನ್ನ ಗೆದ್ದ ಮೇರಿ ಕೋಮ್

ಶನಿವಾರ, 14 ಏಪ್ರಿಲ್ 2018 (08:51 IST)
ನವದೆಹಲಿ: ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್ ನಲ್ಲಿ ನಡೆಯುತ್ತಿರುವ ಕಾಮನ್ ವೆಲ್ತ್ ಗೇಮ್ಸ್ ಕೂಟದಲ್ಲಿ ಭಾರತ ಖ್ಯಾತ ಮಹಿಳಾ ಬಾಕ್ಸಿಂಗ್ ತಾರೆ ಮೇರಿ ಕೋಮ್ ಚಿನ್ನದ ಪದಕ ಗೆದ್ದಿದ್ದಾರೆ.

ಮಹಿಳೆಯರ 48 ಕೆ.ಜಿ. ವಿಭಾಗದ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಮೇರಿ ಕೋಮ್ ಚಿನ್ನ ಗೆದ್ದಿದ್ದಾರೆ. ಇದು ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಮೇರಿ ಕೋಮ್ ಗೆ ಮೊದಲ ಚಿನ್ನದ ಪದಕ ಎಂಬುದು ವಿಶೇಷ.

ಇದರೊಂದಿಗೆ ಭಾರತ ಪದಕ ಪಟ್ಟಿಯಲ್ಲಿ 18 ಚಿನ್ನ, 11 ಬೆಳ್ಳಿ ಮತ್ತು 14 ಕಂಚಿನ ಪದಕ ಸೇರಿದಂತೆ 43 ಪದಕಗಳೊಂದಿಗೆ ಮೂರನೇ ಸ್ಥಾನ ಕಾಯ್ದುಕೊಂಡಿದೆ. ಮೊದಲೆರಡು ಸ್ಥಾನದಲ್ಲಿ ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ಇದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ