ಒಂದೇ ಓವರ್‌ನಲ್ಲಿ ನಾಲ್ಕು ಸಿಕ್ಸರ್ ಬಾರಿಸಿ ಅಬ್ಬರಿಸಿದ ಪಾಂಡ್ಯ

Sampriya

ಶುಕ್ರವಾರ, 29 ನವೆಂಬರ್ 2024 (19:01 IST)
Photo Courtesy X
ಇಂದೋರ್: ಸೈಯದ್ ಮುಶ್ತಾಕ್ ಅಲಿ ಟ್ರೋಫಿ ದೇಶೀಯ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ತ್ರಿಪುರಾ ವಿರುದ್ಧ ಇಂದು ನಡೆದ ಪಂದ್ಯದಲ್ಲಿ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಒಂದೇ ಓವರ್‌ನಲ್ಲಿ ನಾಲ್ಕು ಸಿಕ್ಸರ್‌ಗಳನ್ನು ಸಿಡಿಸಿದ್ದಾರೆ.  ಈ ಮೂಲಕ ಬರೋಡಾ ತಂಡವು ತ್ರಿಪುರಾ ವಿರುದ್ಧ ಏಳು ವಿಕೆಟ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ.

ಮೊದಲು ಬ್ಯಾಟಿಂಗ್ ನಡೆಸಿದ ತ್ರಿಪುರಾ ನಾಯಕ ಮಂದೀಪ್ ಅರ್ಧಶತಕದ (50) ಹೊರತಾಗಿಯೂ ಒಂಬತ್ತು ವಿಕೆಟ್ ನಷ್ಟಕ್ಕೆ 109 ರನ್ ಗಳಿಸಲಷ್ಟೇ ಸಾಧ್ಯವಾಯಿತು. ಬರೋಡಾ ಪರ ಆಕಾಶ್ ಮಹಾರಾಜ್ ಸಿಂಗ್ ಮೂರು ಮತ್ತು ನಾಯಕ ಕೃಣಾಲ್ ಪಾಂಡ್ಯ ಎರಡು ವಿಕೆಟ್ ಗಳಿಸಿದರು.

ಈ ಗುರಿ ಬೆನ್ನಟ್ಟಿದ ಬರೋಡಾ 11.2 ಓವರ್‌ಗಳಲ್ಲೇ ಮೂರು ವಿಕೆಟ್‌ಗಳನ್ನು ಕಳೆದುಕೊಂಡಿತು. ನಾಲ್ಕನೇ ಕ್ರಮಾಂಕದಲ್ಲಿ ಪೀಲ್ಡ್‌ಗಿಳಿದ ಪಾಂಡ್ಯ ಕೇವಲ 23 ಎಸೆತಗಳಲ್ಲಿ ಐದು ಸಿಕ್ಸರ್ ಹಾಗೂ ಮೂರು ಬೌಂಡರಿ ನೆರವಿನಿಂದ 47 ರನ್ ಗಳಿಸಿದರು.

ಪರ್ವೇಜ್ ಸುಲ್ತಾನ್ ಅವರ ಓವರ್‌ವೊಂದರಲ್ಲಿ ನಾಲ್ಕು ಸಿಕ್ಸರ್, ಒಂದು ಬೌಂಡರಿ ಸೇರಿದಂತೆ 28 ರನ್ ಗಳಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ