ರಾಷ್ಟ್ರೀಯ ಕ್ರೀಡಾ ದಿನಕ್ಕೆ ಪ್ರಧಾನಿ ಮೋದಿ ಶುಭಾಷಯ

ಶನಿವಾರ, 29 ಆಗಸ್ಟ್ 2020 (10:56 IST)
ನವದೆಹಲಿ: ಇಂದು ರಾಷ್ಟ್ರೀಯ ಕ್ರೀಡಾ ದಿನವಾಗಿದ್ದು, ಪ್ರಧಾನಿ ಮೋದಿ ಹಾಕಿ ದಿಗ್ಗಜ ಮೇಜರ್ ಧ್ಯಾನ್ ಚಂದ್ ಸ್ಮರಿಸಿಕೊಂಡಿದ್ದಾರೆ.


ತಮ್ಮ ಸಾಮಾಜಿಕ ಜಾಲತಾಣದಲ್ಲಿ ರಾಷ್ಟ್ರೀಯ ಕ್ರೀಡಾ ದಿನಕ್ಕೆ ಶುಭ ಕೋರಿರುವ ಪ್ರಧಾನಿ ಮೋದಿ ಸರಣಿ ಟ್ವೀಟ್ ಗಳ ಮೂಲಕ ಧ್ಯಾನ್ ಚಂದ್ ರ ಸಾಧನೆಯನ್ನು ಕೊಂಡಾಡಿದ್ದಾರೆ. ಅಲ್ಲದೆ, ಕ್ರೀಡೆಯನ್ನು ನಮ್ಮ ದೈನಂದಿನ ಬದುಕಿನ ಭಾಗವಾಗಿಸಬೇಕು ಎಂದು ಕರೆ ನೀಡಿದ್ದಾರೆ.

ರಾಷ್ಟ್ರೀಯ ಕ್ರೀಡಾ ದಿನವಾದ ಇಂದು ರಾಷ್ಟ್ರಪತಿ ಭವನದಲ್ಲಿ ಈ ಸಾಲಿನ ಶ್ರೇಷ್ಠ ಕ್ರೀಡಾ ಸಾಧಕರಿಗೆ ಖೇಲ್ ರತ್ನ, ಅರ್ಜುನ ಪ್ರಶಸ್ತಿ ಸೇರಿದಂತೆ ವಿವಿಧ ವಿಭಾಗಗಳ ಪ್ರಶಸ್ತಿ ಪ್ರಧಾನ ಮಾಡಲಾಗುತ್ತಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ