ಹೈದರಾಬಾದ್: ಭಾರತದ ಖ್ಯಾತ ಟೆನಿಸ್ ತಾರೆ ಸಾನಿಯಾ ಮಿರ್ಜಾ ತೀವ್ರ ಮಂಡಿನೋವಿನಿಂದ ಬಳಲುತ್ತಿದ್ದು, ಶಸ್ತ್ರಚಿಕಿತ್ಸೆಗೊಳಗಾಗಲಿದ್ದಾರೆ.
ಈ ವಿಷಯವನ್ನು ಸ್ವತಃ ಸಾನಿಯಾ ಬಹಿರಂಗಪಡಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಮಂಡಿನೋವಿನಿಂದ ಬಳಲುತ್ತಿದ್ದೇನೆ. ಆದರೆ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳುವ ಬಗ್ಗೆ ಗೊಂದಲದಲ್ಲಿದ್ದೆ ಎಂದು ಸಾನಿಯಾ ಹೇಳಿದ್ದಾರೆ.
ತಮ್ಮ ವೃತ್ತಿ ಜೀವನದಲ್ಲಿ ಹಲವು ಏಳು ಬೀಳುಗಳನ್ನು ಕಂಡಿರುವ ಸಾನಿಯಾ ಇದು ಆರನೇ ಬಾರಿ ಶಸ್ತ್ರಚಿಕಿತ್ಸೆಗೊಳಗಾಗುತ್ತಿದ್ದಾರೆ. ಮಂಡಿ ನೋವಿನ ಕಾರಣಕ್ಕೆ ಕಳೆದ ಕೆಲವು ದಿನಗಳಿಂದ ಸಾನಿಯಾ ಮೈದಾನದಿಂದ ಹೊರಗುಳಿದಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ