ಹೈದರಾಬಾದ್: ಭಾರತದ ಖ್ಯಾತ ಟೆನಿಸ್ ತಾರೆ ಸಾನಿಯಾ ಮಿರ್ಜಾ ಈ ಬಾರಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿ ಈಗ ಬಲವಾಗಿ ಕೇಳಿಬರುತ್ತಿದೆ. ಯಾರ ವಿರುದ್ಧ, ಯಾವ ಪಕ್ಷ ಇಲ್ಲಿದೆ ಡೀಟೈಲ್ಸ್.
ಸಾನಿಯಾ ಈ ಬಾರಿ ಹೈದರಾಬಾದ್ ಲೋಕಸಭಾ ಕ್ಷೇತ್ರದಿಂದ ಎಐಎಂಐಎಂ ಮುಖ್ಯಸ್ಥ ಅಸಾವುದ್ದೀನ್ ಒವೈಸಿ ವಿರುದ್ಧ ಕಣಕ್ಕಿಳಿಯಲಿದ್ದಾರೆ ಎಂಬ ಮಾತುಗಳು ಬಲವಾಗಿ ಕೇಳಿಬರುತ್ತಿದೆ. ಕಾಂಗ್ರೆಸ್ ಪಕ್ಷದಿಂದ ಸಾನಿಯಾ ಕಣಕ್ಕಿಳಿಯಲಿದ್ದಾರೆ ಎನ್ನಲಾಗಿದೆ.
ಕಾಂಗ್ರೆಸ್ ಈಗಾಗಲೇ ಗೋವಾ, ತೆಲಂಗಾಣ, ಉತ್ತರ ಪ್ರದೇಶ, ಜಾರ್ಖಂಡ್ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿದೆ.
ಈ ನಡುವೆ ಹೈದರಾಬಾದ್ ಗೆ ಮುಸ್ಲಿಂ ಪ್ರಬಲ ನಾಯಕ ಒವೈಸಿಯನ್ನು ಮಣಿಸಲು ಸಾನಿಯಾರನ್ನೇ ಕಣಕ್ಕಿಳಿಸಲು ಕಾಂಗ್ರೆಸ್ ನಾಯಕರು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. ಈ ಬಾರಿ ಬಿಜೆಪಿ ಕೂಡಾ ಕೆಲವು ಸೆಲೆಬ್ರಿಟಿಗಳಿಗೆ ಟಿಕೆಟ್ ನೀಡಿದೆ. ಈಗ ಕಾಂಗ್ರೆಸ್ ಕೂಡಾ ಸಾನಿಯಾರಿಗೆ ಗಾಳ ಹಾಕುತ್ತಿದೆ.