ಟೋಕಿಯೊ ಪ್ಯಾರಾಲಿಂಪಿಕ್ಸ್ ಚಿನ್ನ ಗೆದ್ದು ಇತಿಹಾಸ ಬರೆದ ಪ್ರಮೋದ್ ಭಾಗತ್!

ಶನಿವಾರ, 4 ಸೆಪ್ಟಂಬರ್ 2021 (16:54 IST)
ಭಾರತದ ಪ್ರಮೋದ್ ಭಾಗತ್ ಬ್ಯಾಡ್ಮಿಂಟನ್ ನಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಟೋಕಿಯೊ ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೊಂದು ಪದಕ ತಂದುಕೊಟ್ಟಿ
ದ್ದಾರೆ.
ಶನಿವಾರ ನಡೆದ ಪುರುಷರ ಸಿಂಗಲ್ಸ್ ವಿಭಾಗದ ಎಸ್ ಎಲ್ 3 ಸ್ಪರ್ಧೆಯಲ್ಲಿ ಪ್ರಮೋದ್ ಚಿನ್ನದ ಪದಕ ಗೆಲ್ಲುವ ಮೂಲಕ ಪ್ಯಾರಾ ಬ್ಯಾಡ್ಮಿಂಟನ್ ವಿಭಾಗದಲ್ಲಿ ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ಎಂಬ ದಾಖಲೆಗೆ ಪಾತ್ರರಾಗಿದ್ದಾರೆ. ಇದೇ ವಿಭಾಗದಲ್ಲಿ ಮನೋಜ್ ಸರ್ಕಾರ್ ಕಂಚಿನ ಪದಕ ಗೆದ್ದುಕೊಂಡಿದ್ದಾರೆ.
ವಿಶ್ವದ ನಂ.1 ಆಟಗಾರನಾಗಿ ಕಣಕ್ಕಿಳಿದಿದ್ದ ಪ್ರಮೋದ್ ಕೇವಲ 45 ನಿಮಿಷಗಳ ಆಟದಲ್ಲಿ ಬ್ರಿಟನ್ ನ ಡೇನಿಯಲ್ ಬೆಥೆಲ್ ಅವರನ್ನು 21-14, 21-17 ಸೆಟ್ ಗಳಿಂದ ಸೋಲಿಸಿ ಚಿನ್ನದ ಪದಕಕ್ಕೆ ಮುತ್ತಿಕ್ಕಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ