ಪ್ರಧಾನಿ ಮೋದಿ ಹೊಗಳಿದ ವಿರಾಟ್ ಕೊಹ್ಲಿ

ಗುರುವಾರ, 21 ಸೆಪ್ಟಂಬರ್ 2017 (10:36 IST)
ಕೋಲ್ಕೊತ್ತಾ: ಪ್ರಧಾನಿ ಮೋದಿಯವರ ಕ್ರೀಡಾ ಯೋಜನೆಯೊಂದನ್ನು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೊಗಳಿದ್ದಾರೆ. ಖೇಲೋ ಇಂಡಿಯಾ ಯೋಜನೆಗೆ ಪುನಶ್ಚೇತನ ನೀಡಲು ಉದ್ದೇಶಿಸಿರುವ ಕೇಂದ್ರದ ನಿರ್ಧಾರವನ್ನು ಅವರು ಸ್ವಾಗತಿಸಿದ್ದಾರೆ.

 
ಕೇಂದ್ರ ಸಂಪುಟದ ಒಪ್ಪಿಗೆ ಪಡೆದ ಬಳಿಕೆ ಖೇಲೋ ಇಂಡಿಯಾ ಯೋಜನೆಯನ್ನು ಪುನಶ್ಚೇತನಗೊಳಿಸುವ ನಿರ್ಧಾರವನ್ನು ಕ್ರೀಡಾ ಸಚಿವ ಶೂಟರ್ ರಾಜ್ಯವರ್ಧನ್ ಸಿಂಗ್ ರಾಥೋಡ್ ತಮ್ಮ ಟ್ವಿಟರ್ ಪೇಜ್ ನಲ್ಲಿ ಪ್ರಕಟಿಸಿದ್ದರು. ಇದನ್ನು ರಿಟ್ವೀಟ್ ಮಾಡಿರುವ ಕೊಹ್ಲಿ ಖೇಲೋ ಇಂಡಿಯಾ ಪ್ರಧಾನಿ ಮೋದಿ ಮತ್ತು ಕ್ರೀಡಾ ಸಚಿವ ರಾಜ್ಯವರ್ಧನ್ ಸಿಂಗ್ ರಾಥೋಡ್ ಅವರ ಮಹತ್ವಾಕಾಂಕ್ಷಿ ಯೋಜನೆ. ಇದರಿಂದ ಕ್ರೀಡಾ ಕ್ಷೇತ್ರದಲ್ಲಿ ಹೊಸ ಭರವಸೆ ಮೂಡಲಿದೆ ಎಂದು ಟ್ವೀಟ್ ಮಾಡಿದ್ದಾರೆ.

ಈ ಯೋಜನೆಯ  ಅಡಿಯಲ್ಲಿ ಪ್ರತಿಭಾವಂತ ಕ್ರೀಡಾಳುಗಳನ್ನು ಆಯ್ಕೆ ಮಾಡಲಾಗುತ್ತದೆ. ಹಾಗೆ ಆಯ್ಕೆಯಾದ ಕ್ರೀಡಾಳುಗಳಿಗೆ ಸತತ 8 ವರ್ಷಗಳ ಕಾಲ 5 ಲಕ್ಷ ರೂ. ಸ್ಕಾಲರ್ ಶಿಪ್ ಸಿಗಲಿದೆ. ಇದಕ್ಕಾಗಿ ಸರ್ಕಾರ 1,756 ಕೋಟಿ ರೂ. ವಿನಿಯೋಗಿಸಲಿದೆ. ಈ ನಿಟ್ಟಿನಲ್ಲಿ ಹಣಕಾಸು ಸಚಿವ ಅರುಣ್ ಜೇಟ್ಲಿ ಒಪ್ಪಿಗೆಯೂ ನೀಡಿದ್ದಾರೆ.

ಇದನ್ನೂ ಓದಿ…  ಅಮೆರಿಕಾ ಅಧ್ಯಕ್ಷರ ಹೇಳಿಕೆ ನಾಯಿ ಬೊಗಳಿದಂತೆ ಎಂದ ಉತ್ತರ ಕೊರಿಯಾ
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ