Women's T20 WC: ಪಾಕಿಸ್ತಾನ ವಿರುದ್ಧ ಭಾರತಕ್ಕೆ 6 ವಿಕೆಟ್‌ಗಳ ಜಯ

Sampriya

ಭಾನುವಾರ, 6 ಅಕ್ಟೋಬರ್ 2024 (20:00 IST)
Photo Courtesy X
ದುಬೈ: ಇಲ್ಲಿನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಾಕಿಸ್ತಾನ ವಿರುದ್ಧ ಮಹಿಳೆಯರ ಟಿ20 ಪಂದ್ಯಾಟದಲ್ಲಿ ಭಾರತ ತಂಡ 6ವಿಕೆಟ್‌ಗಳ ಅಮೋಘ ಜಯ ಸಾಧಿಸಿತು.  . ಇದರೊಂದಿಗೆ ಟಿ20 ವಿಶ್ವಕಪ್‌  ಪ್ರಸಕ್ತ ಆವೃತ್ತಿಯಲ್ಲಿ ಗೆಲುವಿನ ಖಾತೆ ತೆರೆದು ಸೆಮಿಸ್‌ ಕನಸು ಜೀವಂತವಾಗಿರಿಸಿಕೊಂಡಿದೆ.

ಟಾಸ್‌ ಗೆದ್ದು ಮೊದಲು ಬ್ಯಾಟ್‌ ಬೀಸಿದ ಪಾಕಿಸ್ತಾನ ತಂಡ 20 ಓವರ್‌ಗಳಲ್ಲಿ 8 ವಿಕೆಟ್‌ ಕಳೆದುಕೊಂಡು 105 ರನ್‌ ಗಳಿಸಿತ್ತು. ಪಾಕ್‌ ನೀಡಿದ ಸಾಧರಣ ಮೊತ್ತದ ಗುರಿ ಬೆನ್ನಟ್ಟಿದ ಭಾರತ ತಂಡ  18.5 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ 106 ರನ್‌ ಗಳಿಸಿ ಗೆಲುವಿನ ನಗೆ ಬೀರಿತು.

ಅಲ್ಪ ಮೊತ್ತದ ಗುರಿ ಪಡೆದು ಇನ್ನಿಂಗ್ಸ್‌ ಆರಂಭಿಸಿದ ಭಾರತ ನಿಧಾನಗತಿಯ ಬ್ಯಾಟಿಂಗ್‌ ಆರಂಭಿಸಿತ್ತು. ಒಂದೆಡೆ ರನ್‌ ಕಲೆಹಾಕುತ್ತಿದ್ದರೂ ಮತ್ತೊಂದು ಕಡೆ ವಿಕೆಟ್‌ ಕಳೆದುಕೊಳ್ಳುತ್ತಾ ಸಾಗಿತ್ತು. ಆದ್ರೆ ಆರಂಭಿಕ ಆಟಗಾರ್ತಿ ಶಫಾಲಿ ವರ್ಮಾ, ಜೆಮಿಮಾ ರೊಡ್ರಿಗ್ಸ್‌, ನಾಯಕಿ‌ ಹರ್ಮನ್‌ ಪ್ರೀತ್‌ ಕೌರ್‌ ಅವರ ಸಂಘಟಿತ ಪ್ರದರ್ಶನ ಗೆಲುವು ತಂದುಕೊಡುವಲ್ಲಿ ಯಶಸ್ವಿಯಾಯಿತು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ