ಚಾಂಪಿಯನ್ಸ್ ಟ್ರೋಫಿ ಹಾಕಿ: ಪಾಕಿಸ್ತಾನವನ್ನು ಬಗ್ಗು ಬಡಿದು ಸೆಮಿಗೆ ಲಗ್ಗೆಯಿಟ್ಟ ಭಾರತ
ಭಾರತ ತಂಡದ ಪರ ಹರ್ಮನ್‌ಪ್ರೀತ್ ಸಿಂಗ್ ಎರಡು ಗೋಲುಗಳನ್ನು ಹೊಡೆದು ತಂಡದ ಗೆಲುವಿಗೆ ಕಾರಣರಾದರು. ಗುಂಪು ಹಂತದಲ್ಲಿ ಅಜೇಯವಾಗಿ ಉಳಿದಿರುವ ಭಾರತ ಈಗಾಗಲೇ ಸೆಮಿಫೈನಲ್ ಸ್ಥಾನವನ್ನು ಕಾಯ್ದಿರಿಸಿತ್ತು.
ಆರು ತಂಡಗಳಿರುವ ಕಣದಲ್ಲಿ ಭಾರತ ಆಡಿರುವ ಐದು ಪಂದ್ಯಗಳನ್ನು ಹೆಚ್ಚಿನ ಪ್ರಯಾಸವಿಲ್ಲದೇ ಗೆದ್ದುಕೊಂಡಿದೆ. ಪಾಯಿಂಟ್ಸ್ ಪಟ್ಟಿಯಲ್ಲಿ ಭಾರತ ಅಗ್ರಸ್ಥಾನದಲ್ಲಿದೆ.
ಪ್ಯಾರಿಸ್ ಒಲಿಂಪಿಕ್ಸ್ 2024ರಲ್ಲಿ ಭಾರತ ಕಂಚಿನ ಪದಕ ಗೆದ್ದಿತ್ತು.