ರಿಯೋ ಒಲಿಂಪಿಕ್ಸ್‌ಗಾಗಿ ಕಠಿಣ ಪರಿಶ್ರಮಪಟ್ಟಿದ್ದೇನೆ: ಪಿ.ವಿ.ಸಿಂಧು

ಶನಿವಾರ, 20 ಆಗಸ್ಟ್ 2016 (18:54 IST)
ರಿಯೋ ಒಲಂಪಿಕ್ಸ್ ಪಂದ್ಯಾವಳಿಯಲ್ಲಿ ಬೆಳ್ಳಿ ಪದಕ ಗೆದ್ದ ಮೊದಲ ಭಾರತೀಯಳು ಎನ್ನುವ ಇತಿಹಾಸ ಸೃಷ್ಟಿಸಿದ ಪಿ.ವಿ.ಸಿಂಧು ಕೇವಲ 21 ವರ್ಷ ವಯಸ್ಸಿನಲ್ಲಿಯೇ ಅಭೂತಪೂರ್ವ ಸಾಧನೆ ಮಾಡಿದ್ದಾಳೆ.
 
ಸುದ್ದಿಗಾರರೊಂದಿಗೆ ಮಾತನಾಡಿದ ಸಿಂಧು, ಒಲಿಂಪಿಕ್ ಪಂದ್ಯಾವಳಿಯಲ್ಲಿ ಚಿನ್ನದ ಪದಕ ಪಡೆಯಲು ತುಂಬಾ ಕಠಿಣ ಪರಿಶ್ರಮ ಪಟ್ಟಿದ್ದು ಅದಕ್ಕೆ ಫಲ ದೊರೆತಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾಳೆ.
 
ಪಂದ್ಯಾವಳಿಗೆ ಮುಂಚೆ ಕೋಚ್ ಪುಲ್ಲೇಲ ಗೋಪಿಚಂದ್ ಸಿಂಧುವಿಗೆ ಕಠಿಣ ಡಯಿಟ್ ಪಾಲಿಸುವಂತೆ ಕೋರಿದ್ದರು. ಇದೀಗ ಸಿಂಧು ತನಗೆ ಇಷ್ಟವಾದ ಆಹಾರಗಳನ್ನು ಸೇವಿಸಲು ತುದಿಗಾಲ ಮೇಲೆ ನಿಂತಿದ್ದಾಳೆ. 
 
ಮುಂಬರುವ 2020 ಟೋಕಿಯೋ ಒಲಿಂಪಿಕ್ ಪಂದ್ಯಾವಳಿಯಲ್ಲಿ ಚಿನ್ನದ ಪದಕ ಪಡೆಯುವ ವಿಶ್ವಾಸ ವ್ಯಕ್ತಪಡಿಸಿರುವ ಸಿಂಧು, ಅದಕ್ಕಾಗಿ ಕಠಿಣ ಪರಿಶ್ರಮ ಪಡುತ್ತೇನೆ ಎಂದು ತಿಳಿಸಿದ್ದಾರೆ.
 
ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದಿರುವುದು ಆತ್ಮವಿಶ್ವಾಸ ಹೆಚ್ಚಿಸಿದೆ. ಮುಂಬರುವ ಸೂಪರ್ ಸೀರಿಸ್‌ನಲ್ಲಿ ಪ್ರಶಸ್ತಿ ಗೆಲ್ಲಬಹುದು ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

ವೆಬ್ದುನಿಯಾವನ್ನು ಓದಿ