ನವದೆಹಲಿ: ಭಾರತದ ಖ್ಯಾತ ಟೆನಿಸ್ ತಾರೆ ಲಿಯಾಂಡರ್ ಪೇಸ್ ಬಾಲಿವುಡ್ ನಟಿ ಕಿಮ್ ಶರ್ಮಾ ಜೊತೆ ಡೇಟಿಂಗ್ ಮಾಡುತ್ತಿರುವುದನ್ನು ಒಪ್ಪಿಕೊಂಡಿದ್ದಾರೆ.
ಇತ್ತೀಚೆಗೆ ಇಬ್ಬರೂ ಜೊತೆಯಾಗಿರುವ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಇದೀಗ ಸ್ವತಃ ಪೇಸ್ ತಮ್ಮಿಬ್ಬರ ನಡುವಿನ ಸಂಬಂಧವನ್ನು ಅಧಿಕೃತವಾಗಿ ಒಪ್ಪಿಕೊಂಡಿದ್ದಾರೆ.
48 ವರ್ಷದ ಪೇಸ್ ಈ ಹಿಂದೆ ರಿಯಾ ಪಿಳ್ಳೈ ಜೊತೆ ಮದುವೆಯಾಗಿ ವಿಚ್ಛೇದನ ಪಡೆದಿದ್ದರು. ಬಳಿಕ ನಟಿ ಮಹಿಮಾ ಚೌಧರಿ ಜೊತೆಗೂ ಅವರಿಗೆ ಅಫೇರ್ ಇರುವುದಾಗಿ ಸುದ್ದಿ ಹಬ್ಬಿತ್ತು. ಇದೀಗ ಕಿಮ್ ಶರ್ಮಾ ಜೊತೆ ಡೇಟಿಂಗ್ ಮಾಡುತ್ತಿರುವುದು ಅಧಿಕೃತವಾಗಿದೆ.