ಮಲೇಷ್ಯಾ ಮಾಸ್ಟರ್ಸ್ ಬ್ಯಾಡ್ಮಿಂಟನ್​ ಟೂರ್ನಿ: ಫೈನಲ್‌ಗೆ ಲಗ್ಗೆಯಿಟ್ಟ ಸಿಂಧು

sampriya

ಶನಿವಾರ, 25 ಮೇ 2024 (19:50 IST)
Photo By X
ಕೌಲಾಲಂಪುರ: ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ್ತಿ ಪಿವಿ ಸಿಂಧು ಅವರು ಮಲೇಷ್ಯಾ ಮಾಸ್ಟರ್ಸ್ ಬ್ಯಾಡ್ಮಿಂಟನ್​ ಟೂರ್ನಿಯ ಮಹಿಳೆಯರ ಸಿಂಗಲ್ಸ್‌ ಸೆಮಿಫೈನಲ್ ಪಂದ್ಯದಲ್ಲಿ ಥಾಯ್ಲೆಂಡ್‌ನ ಬುಸಾನನ್ ಒಂಗ್‌ಬಮ್ರುಂಗ್‌ಫಾನ್ ಅವರನ್ನು ಸೋಲಿಸಿ ಫೈನಲ್‌ಗೆ ಲಗ್ಗೆ ಹಾಕಿದರು.

ಕೌಲಾಲಂಪುರದಲ್ಲಿ ಶನಿವಾರ ನಡೆದ ಮಲೇಷ್ಯಾ ಮಾಸ್ಟರ್ಸ್ ಬ್ಯಾಡ್ಮಿಂಟನ್‌ ಟೂರ್ನಿಯ ಮಹಿಳೆಯರ ಸಿಂಗಲ್ಸ್ ವಿಭಾಗದಲ್ಲಿ 5ನೇ ಶ್ರೇಯಾಂಕಿತ ಸಿಂಧು ಅವರು ಫೈನಲ್‌ ಪ್ರವೇಶಿಸಿದ್ದಾರೆ. 88 ನಿಮಿಷಗಳ ಕಾಲ ನಡೆದ ಜಿದ್ದಾ-ಜಿದ್ದಿ ಹೋರಾಟದಲ್ಲಿ ವಿಶ್ವದ 20ನೇ ಶ್ರೇಯಾಂಕಿತ ಬುಸಾನನ್ ವಿರುದ್ಧ 13-21 21-16 21-12 ಅಂಕಗಳೊಂದಿಗೆ ಗೆಲುವು ಸಾಧಿಸಿದರು.

ಇದು ಬಿಡಬ್ಲ್ಯುಎಫ್ ವರ್ಲ್ಡ್ ಟೂರ್ ಸೂಪರ್ 500 ಟೂರ್ನಿಯಲ್ಲಿ ಸಿಂಧು ಅವರ ವೃತ್ತಿಜೀವನದ ನಾಲ್ಕನೇ ಫೈನಲ್ ಆಗಿದೆ. ಇದೀಗ ಸಿಂಧು ಫೈನಲ್ ಪಂದ್ಯದಲ್ಲಿ ಚೀನಾದ ಆಟಗಾರ್ತಿ ವಾಂಗ್ ಕ್ಸಿ ಯಿ ಅವರನ್ನು ಎದುರಿಸಬೇಕಾಗಿದೆ.

ಎರಡು ಬಾರಿಯ ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದಿರುವ 15ನೇ ಶ್ರೇಯಾಂಕದ ಆಟಗಾರ್ತಿ ಸಿಂಧುಗೆ ಈ ಗೆಲುವು ಮುಂಬರುವ ಪ್ಯಾರಿಸ್ ಒಲಿಂಪಿಕ್ಸ್‌ಗೂ ಮುನ್ನ ಅವರ ಆತ್ಮವಿಶ್ವಾಸವನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ