ಕಾಮನ್ ವೆಲ್ತ್ ಗೇಮ್ಸ್ ಗೆ ಮೊದಲು ಬಿಗ್ ಶಾಕ್: ನೀರಜ್ ಚೋಪ್ರಾಗೆ ಗಾಯ
ಟೋಕಿಯೋ ಒಲಿಂಪಿಕ್ಸ್ ಚಿನ್ನದ ಪದಕ ವಿಜೇತ ಮತ್ತು ಇತ್ತೀಚೆಗೆ ವಿಶ್ವ ಅಥ್ಲೆಟಿಕ್ ಚಾಂಪಿಯನ್ ಶಿಪ್ ನಲ್ಲಿ ಬೆಳ್ಳಿ ಪದಕ ಗೆದ್ದುಕೊಂಡಿದ್ದ ನೀರಜ್ ಮೇಲೆ ಭಾರತೀಯರಿಗೆ ಭಾರೀ ನಿರೀಕ್ಷೆಯಿತ್ತು.
ಆದರೆ ಅವರೀಗ ಗಾಯಕ್ಕೊಳಗಾಗಿದ್ದು ಕಾಮನ್ ವೆಲ್ತ್ ಗೇಮ್ಸ್ ಮಿಸ್ ಮಾಡಿಕೊಳ್ಳಲಿದ್ದಾರೆ ಎಂಬ ಸುದ್ದಿ ಬಂದಿದೆ. 2018 ರ ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ನೀರಜ್ ಚಿನ್ನದ ಪದಕ ಗೆದ್ದಿದ್ದರು. ಆದರೆ ಈ ಬಾರಿ ಗಾಯಗೊಂಡು ತೀವ್ರ ನಿರಾಸೆ ಅನುಭವಿಸಿದ್ದಾರೆ.