ಪ್ಯಾರಾಲಿಂಪಿಕ್ಸ್: ಜ್ವಾವೆಲಿನ್ ಥ್ರೋನಲ್ಲಿ ಚಿನ್ನ ಗೆದ್ದ ಸುಮಿತ್

ಸೋಮವಾರ, 30 ಆಗಸ್ಟ್ 2021 (16:48 IST)
ಟೋಕಿಯೋ: ಪ್ಯಾರಾಲಿಂಪಿಕ್ಸ್ ನ ಜ್ವಾವೆಲಿನ್ ಥ್ರೋ ವಿಭಾಗದಲ್ಲಿ ಭಾರತದ ಸುಮಿತ್ ಅಂತಿಲ್ ವಿಶ್ವ ದಾಖಲೆ ಮುರಿದು ಚಿನ್ನದ ಪದಕಕ್ಕೆ ಮುತ್ತಿಕ್ಕಿದ್ದಾರೆ.

Photo Courtesy: Google

ಒಟ್ಟು 68.55 ಮೀ. ದೂರ ಎಸೆದು ವಿಶ್ವದಾಖಲೆ ನಿರ್ಮಿಸಿದ ಸುಮಿತ್ ಭಾರತಕ್ಕೆ ಎರಡನೇ ಚಿನ್ನದ ಪದಕ ಗೆದ್ದು ಕೊಟ್ಟಿದ್ದಾರೆ.
ಇದಕ್ಕೂ ಮೊದಲು ಇಂದು ಬೆಳಿಗ್ಗೆ ಶೂಟಿಂಗ್ ನಲ್ಲಿ ಅವನಿ ಚಿನ್ನದ ಪದಕ ಗೆದ್ದಿದ್ದರು. ಇದರೊಂದಿಗೆ ಭಾರತ ಒಂದೇ ದಿನ ಎರಡು ಚಿನ್ನದ ಪದಕ ಗೆದ್ದುಕೊಂಡಂತಾಗಿದೆ.

ಇದರೊಂದಿಗೆ ಭಾರತ ಪದಕ ಪಟ್ಟಿಯಲ್ಲಿ ಏಳು ಪದಕ ಪಡೆದು 25 ನೇ ಸ್ಥಾನಕ್ಕೇರಿದೆ. ಇದು ಅತ್ಯಪೂರ್ವ ಸಾಧನೆಯಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ