ಇತಿಹಾಸ ಸೃಷ್ಟಿಸಿದ ಹಾಕಿ ತಂಡಕ್ಕೆ ಪ್ರಧಾನಿ ಮೋದಿ ಸೇರಿದಂತೆ ಅಭಿನಂದನೆಗಳ ಮಹಾಪೂರ

ಗುರುವಾರ, 5 ಆಗಸ್ಟ್ 2021 (09:14 IST)
ಟೋಕಿಯೋ: ಒಲಿಂಪಿಕ್ಸ್ ನಲ್ಲಿ 41 ವರ್ಷಗಳ ಬಳಿಕ ಪದಕ ಗೆದ್ದ ಭಾರತ ಪುರುಷರ ಹಾಕಿ ತಂಡಕ್ಕೆ ಪ್ರಧಾನಿ ಮೋದಿ ಸೇರಿದಂತೆ ಸೆಲೆಬ್ರಿಟಿಗಳು, ಅಭಿಮಾನಿಗಳು ಅಭಿನಂದನೆ ಸಲ್ಲಿಸಿದ್ದಾರೆ.


ಇದು ಐತಿಹಾಸಿಕ ಕ್ಷಣ. ಕಂಚು ಗೆದ್ದ ಹಾಕಿ ತಂಡದ ಪ್ರತಿಯೊಬ್ಬ ಆಟಗಾರನಿಗೂ ಅಭಿನಂದನೆಗಳು. ಈ ಗೆಲುವಿನೊಂದಿಗೆ ಅವರು ಇಡೀ ದೇಶದ ಚಿತ್ರಣವನ್ನು ಅದರಲ್ಲೂ ವಿಶೇಷವಾಗಿ ಯುವಜನರ ಮನಸ್ಥಿತಿಯನ್ನು ಸೆರೆಹಿಡಿದಿದ್ದಾರೆ. ಭಾರತ ನಮ್ಮ ಹಾಕಿ ತಂಡದ ಬಗ್ಗೆ ಹೆಮ್ಮೆ ಹೊಂದಿದೆ’ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಇವರಲ್ಲದೆ ಕ್ರೀಡಾ ಸಚಿವ ಅನುರಾಗ್ ಠಾಕೂರ್, ಗೃಹ ಸಚಿವ ಅಮಿತ್ ಶಾ,  ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್, ಪುಲ್ಲೇಲ ಗೋಪಿಚಂದ್ ಸೇರಿದಂತೆ ಅನೇಕ ಸೆಲೆಬ್ರಿಟಿಗಳು, ಅಭಿಮಾನಿಗಳು ಸಾಮಾಜಿಕ ಜಾಲತಾಣದ ಮೂಲಕ ಶುಭ ಹಾರೈಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ