ಬೆಳ್ಳಿ ಗೆದ್ದ ನೀರಜ್ ಚೋಪ್ರಾ ಕೊಂಡಾಡಿದ ಪ್ರಧಾನಿ ಮೋದಿ

ಭಾನುವಾರ, 24 ಜುಲೈ 2022 (10:22 IST)
ನವದೆಹಲಿ: ವಿಶ್ವ ಅಥ್ಲೆಟಿಕ್ ಚಾಂಪಿಯನ್ ಶಿಪ್ ನ ಜ್ಯಾವೆಲಿನ್ ಥ್ರೋ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದು ಐತಿಹಾಸಿಕ ಸಾಧನೆ ಮಾಡಿದ ಭಾರತದ ನೀರಜ್ ಚೋಪ್ರಾಗೆ ಪ್ರಧಾನಿ ಮೋದಿ ಅಭಿನಂದಿಸಿದ್ದಾರೆ.

ನೀರಜ್ ಚೋಪ್ರಾ ವಿಶ್ವ ಅಥ್ಲೆಟಿಕ್ ಚಾಂಪಿಯನ್ ಶಿಪ್ ನಲ್ಲಿ ಪದಕ ಗೆದ್ದ ಕೇವಲ ಎರಡನೇ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.

ಈ ಸಾಧನೆಗೆ ನೀರಜ್ ಚೋಪ್ರಾರನ್ನು ಕೊಂಡಾಡಿರುವ ಪ್ರಧಾನಿ ಮೋದಿ, ‘ನಮ್ಮ ಹೆಮ್ಮೆಯ ಕ್ರೀಡಾಪಟುವಿನಿಂದ ಅತ್ಯುತ್ತಮ ಸಾಧನೆ. ನೀರಜ್ ಚೋಪ್ರಾಗೆ ಅಭಿನಂದನೆಗಳು. ಇದು ನಮ್ಮ ಭಾರತೀಯ ಕ್ರೀಡಾ ಕ್ಷೇತ್ರದಲ್ಲಿ ವಿಶೇಷ ಗಳಿಗೆ. ನೀರಜ್ ಚೋಪ್ರಾ ಭವಿಷ್ಯಕ್ಕೆ ಶುಭ ಹಾರೈಕೆಗಳು’ ಎಂದು ಟ್ವೀಟ್ ಮಾಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ