ಸೆಪ್ಟೆಂಬರ್ 7 ರಿಂದ ರಿಯೋದಲ್ಲಿ ಆರಂಭವಾಗಲಿರುವ ಪ್ಯಾರಾಲಿಂಪಿಕ್ಸ್ ಕ್ರೀಟಾಕೂಟದಲ್ಲಿ ಭಾಗವಹಿಸಲಿರುವ ಭಾರತೀಯ ಕ್ರೀಡಾಪಟುಗಳಿಗೆ ಪ್ರಧಾನಿ ನರೇಂದ್ರ ಮೋದಿ ಗುರುವಾರ ಶುಭ ಹಾರೈಸಿದ್ದಾರೆ.
ಕ್ರೀಡಾಕೂಟದಲ್ಲಿ ನಮ್ಮ ಕ್ರೀಡಾಪಟುಗಳು ಉತ್ತಮ ಸಾಧನೆ ತೋರಲಿ ಎಂದು ಭಾರತದ ಜನತೆಯ ಶುಭ ಹಾರೈಕೆಗಳು ಎಂದು ಅವರು ಹೇಳಿದ್ದಾರೆ.
ರಿಯೋ ಪ್ಯಾರಾಲಿಂಪಿಕ್ಸ್‌ನಲ್ಲಿ ಪಾಲ್ಗೊಳ್ಳಲಿರುವ ನಮ್ಮ ತಂಡಕ್ಕೆ ನಾವು ಶುಭಾಶಯಗಳನ್ನು ಕೋರುತ್ತೇವೆ . ಅತ್ಯುತ್ತಮ ಸಾಧನೆ ಮಾಡುವ ಮೂಲಕ ನಮ್ಮ ಕ್ರೀಡಾಪಟುಗಳು ದೇಶಕ್ಕೆ ಹೆಮ್ಮೆ ತರುತ್ತಾರೆಂಬ ವಿಶ್ವಾಸ ನನಗಿದೆ ಎಂದು ಪ್ರಧಾನಿ ತಿಳಿಸಿದ್ದಾರೆ.
15 ಪುರುಷ ಮತ್ತು ಇಬ್ಬರು ಮಹಿಳೆಯರು ಸೇರಿದಂತೆ ಒಟ್ಟು 15 ಸದಸ್ಯರುಳ್ಳ ಭಾರತ ತಂಡ ಕ್ರೀಡಾಕೂಟದ ಐದು ವಿವಿಧ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
ಈವರೆಗೆ ಪ್ಯಾರಾಲಿಂಪಿಕ್ಸ್‌ಗೆ ಕಳುಹಿಸಲ್ಪಟ್ಟ ತಂಡಗಳಲ್ಲಿ ಇದು ದೊಡ್ಡದೆನಿಸಿದೆ.
ಕಳೆದ ವಾರ ಮುಕ್ತಾಯವಾದ ಓಲಂಪಿಕ್ಸ್‌ನಲ್ಲಿ ಭಾರತಕ್ಕೆ ಒಂದು ಬೆಳ್ಳಿ ಮತ್ತು ಒಂದು ಕಂಚಿನ ಪದಕ ದಕ್ಕಿದ್ದವು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ