ಟೋಕಿಯೋ: ಭಾರತ ಅಪಾರ ಭರವಸೆ ಇಟ್ಟುಕೊಂಡಿರುವ ಬ್ಯಾಡ್ಮಿಂಟನ್ ತಾರೆ ಪಿ.ವಿ. ಸಿಂಧು ನಾಳೆ ಟೋಕಿಯೋ ಒಲಿಂಪಿಕ್ಸ್ ನಲ್ಲಿ ತಮ್ಮ ಮೊದಲ ಪಂದ್ಯವಾಡಲಿದ್ದಾರೆ.
ಸಿಂಧು ನಾಳೆ ಮಹಿಳಾ ಸಿಂಗಲ್ಸ್ ನಲ್ಲಿ ಇಸ್ರೇಲ್ ನ ಪೊಲಿಕರ್ಪೋವಾ ವಿರುದ್ಧ ಗ್ರೂಪ್ ಜೆ ಪಂದ್ಯದಲ್ಲಿ ಸೆಣಸಾಡಲಿದ್ದಾರೆ. ಈ ಪಂದ್ಯ ಭಾರತೀಯ ಕಾಲಮಾನ ಪ್ರಕಾರ ಬೆಳಿಗ್ಗೆ 7.10 ಕ್ಕೆ ನಡೆಯಲಿದೆ.
ಕಳೆದ ಒಲಿಂಪಿಕ್ಸ್ ನಲ್ಲಿ ಫೈನಲ್ಸ್ ನಲ್ಲಿ ಸೋತು ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡಿದ್ದ ಪಿ.ವಿ. ಸಿಂಧು ಈ ಬಾರಿ ಚಿನ್ನದ ಪದಕ ಬೇಟೆಯಾಡಬಹುದು ಎಂದು ನಿರೀಕ್ಷಿಸಲಾಗಿದೆ.