ವಿಂಬಲ್ಡನ್ ಪಂದ್ಯಾವಳಿಯಿಂದ ಮರಿಯಾ ಶರಪೋವಾ ಹೊರಗುಳಿಯಲು ನಿರ್ಧಾರ
ಭಾನುವಾರ, 11 ಜೂನ್ 2017 (11:35 IST)
ಲಂಡನ್:ಖ್ಯಾತ ಟೆನ್ನಿಸ್ ತಾರೆ ಮರಿಯಾ ಶರಪೋವಾ ಅಭಿಮಾನಿಗಳಿಗೆ ಮತ್ತೆ ನಿರಾಸೆ ಮೂಡಿಸಿದ್ದಾರೆ. ಕಾಲಿನ ಗಾಯದಿಂದ ಚೇತರಿಸಿಕೊಳ್ಳದ ಶರಪೋವಾ ವಿಂಬಲ್ಡನ್ ಪಂದ್ಯಾವಳಿಯಿಂದ ಹೊರಗುಳಿದಿದ್ದಾರೆ. ಇದು ಅಭಿಮಾನಿಗಳಲ್ಲಿ ನಿರಾಸೆಗೆ ಕಾರಣವಾಗಿದೆ.
ಕಾಲಿನ ಗಾಯ ಸಂಪೂರ್ಣವಾಗಿ ಗುಣಮುಖವಾಗದಿರುವುದು ಸ್ಕ್ಯಾನ್ ನಿಂದಾಗಿ ತಿಳಿದಿದೆ. ಈ ಹಿನ್ನೆಲೆಯಲ್ಲಿ ಟೂರ್ನಿಯಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ ಎಂದು ಶರಪೋವಾ ಹೇಳಿಕೆ ನೀಡಿದ್ದಾರೆ.
ಜುಲೈ 31 ರಿಂದ ಸ್ಟ್ಯಾಂಡ್ ಪೋರ್ಡ್ ನಲ್ಲಿ ಆರಂಭವಾಗುವ ಟೂರ್ನಮೆಂಟ್ ನಲ್ಲಿ ಭಾಗವಹಿಸುವುದಾಗಿ ಅವರು ಹೇಳಿದ್ದಾರೆ. ಡೋಪಿಂಗ್ ನಿಷೇಧದ ಅವಧಿ ಮುಗಿದ ಬಳಿಕ ವೃತ್ತಿ ಜೀವನದ ಎರಡನೇ ಇನ್ನಿಂಗ್ಸ್ ಆರಂಭವಾಗುತ್ತದೆ ಎಂಬ ನಿರೀಕ್ಷೆಯಲ್ಲಿದ್ದ ಅವರ ಅಭಿಮಾನಿಗಳಿಗೆ ಈಗ ನಿರಾಸೆಯಾಗಿದೆ.
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..