ಟ್ವೆಂಟಿ 20 ವಿಶ್ವಕಪ್: ದಕ್ಷಿಣ ಆಫ್ರಿಕಾ ವಿರುದ್ಧ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ
ರೋಹಿತ್ ಶರ್ಮಾ ನಾಯಕತ್ವದಲ್ಲಿ ಈ ಭಾರಿ ಟಿ20 ವಿಶ್ವಕಪ್ ಗೆಲ್ಲುವ ಗುರಿ ಹೊಂದಿರುವ ತಂಡ ಭಾರೀ ಪ್ರಾಕ್ಟೀಸ್‌ನೊಂದಿಗೆ ಗ್ರೌಂಡ್‌ಗೆ ಇಳಿದಿದೆ. ಇನ್ನೂ ಐಸಿಸಿ ವಿಶ್ವಕಪ್ ಟೂರ್ನಿಯಲ್ಲಿ ದಕ್ಷಿಣ ಆಫ್ರಿಕಾ ಇದೇ ಮೊದಲ ಬಾರಿಗೆ ಫೈನಲ್‌ಗೆ ಪ್ರವೇಶಿಸಿದ್ದು, ಚೊಚ್ಚಲ ಟ್ರೋಫಿ ಗೆಲ್ಲುವ ಗುರಿ ಹೊಂದಿದೆ.
ಈ ವಿಶ್ವಕಪ್ ಬಳಿಕ ಕೋಚ್ ರಾಹುಲ್ ದ್ರಾವಿಡ್ ಅವರ ಅವಧಿ ಮುಕ್ತಾಯವಾಗಲಿದ್ದು, ತಂಡದ ಆಟಗಾರರು ಈ ಬಾರಿ ದ್ರಾವಿಡ್ ಅವರಿಗಾಗಿ ವಿಶ್ವಕಪ್ ಗೆಲ್ಲುವ ಕನಸನ್ನು ಇಟ್ಟುಕೊಂಡಿದ್ದಾರೆ.