ಕಾಸ್ಮೆಟಿಕ್ ಸರ್ಜರಿ ವೇಳೆ ಅವಾಂತರ: ಕಿರುತೆರೆ ನಟಿ ಚೇತನಾ ಸಾವು
21 ವರ್ಷದ ಚೇತನಾ ನವರಂಗ್ ಸರ್ಕಲ್ ನ ಶೆಟ್ಟಿ ಕಾಸ್ಮೆಟಿಕ್ ಆಸ್ಪತ್ರೆಗೆ ದಾಖಲಾಗಿದ್ದರು. ಫ್ಯಾಟ್ ಸರ್ಜರಿ ವೇಳೆ ಶ್ವಾಸಕೋಶದಲ್ಲಿ ನೀರು ಶೇಖರಣೆಯಾಗಿ ಸಾವನ್ನಪ್ಪಿದ್ದಾರೆ. ವೈದ್ಯರ ನಿರ್ಲ್ಯಕ್ಷ್ಯದಿಂದಲೇ ಚೇತನಾ ಸಾವನ್ನಪ್ಪಿದ್ದಾಳೆ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೆಲವು ಧಾರವಾಹಿ, ಸಿನಿಮಾಗಳಲ್ಲಿ ನಟಿಸಿದ್ದ ಚೇತನಾ ಅನುಮಾನಾಸ್ಪದ ಸಾವಿನ ಬಗ್ಗೆ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.