ಡ್ಯಾನ್ಸ್ ರಿಯಾಲಿಟಿ ಶೋನಲ್ಲಿ ಯಕ್ಷಗಾನಕ್ಕೆ ಅವಮಾನ: ಕ್ಷಮೆ ಯಾಚಿಸಿದ ಖಾಸಗಿ ವಾಹಿನಿ
ಕಳೆದ ವಾರ ಪ್ರಸಾರವಾದ ಸಂಚಿಕೆಯಲ್ಲಿ ಯಕ್ಷಗಾನ ವೇಷಧರಿಸಿ ರೊಮ್ಯಾಂಟಿಕ್ ಹಾಡಿಗೆ ಹೆಜ್ಜೆ ಹಾಕಿದ್ದು ಯಕ್ಷಗಾನ ಪ್ರಿಯರ ಕೆಂಗಣ್ಣಿಗೆ ಗುರಿಯಾಗಿತ್ತು. ಈ ಬಗ್ಗೆ ಭಾರೀ ಆಕ್ರೋಶ ಕಂಡುಬಂದ ಹಿನ್ನಲೆಯಲ್ಲಿ ಜೀ ವಾಹಿನಿ ಸೋಷಿಯಲ್ ಮೀಡಿಯಾ ಮೂಲಕ ಪ್ರಕಟಣೆ ನೀಡಿದೆ.
ಕಳೆದ ಪ್ರಸಾರವಾದ ಯಕ್ಷಗಾನ ಕೆಲವರ ಭಾವನೆಗಳಿಗೆ ಧಕ್ಕೆಯಾಗಿದ್ದು ನಮ್ಮ ಗಮನಕ್ಕೆ ಬಂದಿದೆ. ಇದು ಉದ್ದೇಶಪೂರ್ವಕವಾಗಿ ನಡೆದಿದ್ದಲ್ಲ ಮತ್ತು ಇದಕ್ಕೆ ಈ ಮೂಲಕ ಕ್ಷಮೆ ಯಾಚಿಸುತ್ತೇವೆ ಎಂದು ಪ್ರಕಟಣೆ ಮೂಲಕ ಕ್ಷಮೆ ಯಾಚಿಸಿದೆ. ಹಾಗಿದ್ದರೂ ಕೆಲವರು ಕೇವಲ ಸೋಷಿಯಲ್ ಮೀಡಿಯಾದಲ್ಲಿ ಕ್ಷಮೆ ಕೇಳಿದರೆ ಸಾಲದು, ಕಾರ್ಯಕ್ರಮದ ವೇದಿಕೆಯಲ್ಲೇ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.