ಅಪಘಾತದಲ್ಲಿ ನಿಧನರಾದ ರಿಯಾಲಿಟಿ ಶೋ ಸ್ಟಾರ್ ಮೆಬಿನಾ ಕುಟುಂಬದ ಪರಿಸ್ಥಿತಿ ಹೇಗಾಗಿದೆ ಗೊತ್ತಾ?!

ಬುಧವಾರ, 3 ಜೂನ್ 2020 (09:49 IST)
ಬೆಂಗಳೂರು: ಇತ್ತೀಚೆಗಷ್ಟೇ ರಸ್ತೆ ಅಪಘಾತದಲ್ಲಿ ನಿಧನರಾದ ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫ್ ರಿಯಾಲಿಟಿ ಶೋ ವಿನ್ನರ್ ಮೆಬಿನಾ ಮೈಕಲ್ ಕುಟುಂಬದ ಪರಿಸ್ಥಿತಿ ಶೋಚನೀಯವಾಗಿದೆ.


ಮೆಬಿನಾ ಕುಟುಂಬಕ್ಕೆ ಆಧಾರವಾಗಿದ್ದರು. ಅವರ ತಂದೆ ಕೆಲವು ವರ್ಷಗಳ ಹಿಂದೆ ತೀರಿಕೊಂಡಿದ್ದರು. ತಾಯಿ ಮತ್ತು ತಮ್ಮನನ್ನು ಅವರೇ ಸಲಹುತ್ತಿದ್ದರು. ಆದರೆ ಈಗ ಕುಟುಂಬಕ್ಕೆ ಆಧಾರವಾಗಿದ್ದ ಮೆಬಿನಾರನ್ನು ಕಳೆದುಕೊಂಡ ಅವರ ಕುಟುಂಬಕ್ಕೆ ದೈನಂದಿನ ಬದುಕು ಸವೆಸುವುದು ಕಷ್ಟವಾಗಿದೆ.

ಈ ಹಿನ್ನಲೆಯಲ್ಲಿ ಕಿರುತೆರೆ ಸೆಲೆಬ್ರಿಟಿಗಳು ಈಗ ಮೆಬಿನಾ ಕುಟುಂಬಕ್ಕೆ ಆರ್ಥಿಕ ನೆರವು ನೀಡಲು ಮುಂದಾಗಿದ್ದಾರೆ. ಅಲ್ಲದೆ ಸಾಮಾಜಿಕ ಜಾಲತಾಣದ ಮೂಲಕ ಅವರ ತಾಯಿಯವರ ಬ್ಯಾಂಕ್ ಖಾತೆ ಸಂಖ್ಯೆ ನೀಡಿ ಸಹಾಯ ಮಾಡುವಂತೆ ಕರೆ ನೀಡುತ್ತಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ