ವಿವಾದದ ನಡುವೆಯೇ ಆರ್ ಎಸ್ಎಸ್ ಸಮಾರಂಭಕ್ಕೆ ಆಗಮಿಸಿದ ಪ್ರಣಬ್ ಮುಖರ್ಜಿ
ನಿನ್ನೆ ರಾತ್ರಿಯೇ ಪ್ರಣಬ್ ನಾಗ್ಪುರಕ್ಕೆ ಬಂದಿಳಿದಿದ್ದಾರೆ. ಕಾಂಗ್ರೆಸ್ ನಾಯಕರಾದ ಪ್ರಣಬ್ ಆರ್‍ಎಸ್ಎಸ್ ಕಾರ್ಯಕ್ರಮದಲ್ಲಿ ಭಾಗವಹಿಸುವುದಕ್ಕೆ ಪಕ್ಷದ ನಾಯಕರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಸದಾ ಆರ್‍ಎಸ್ಎಸ್ ವಿರೋಧಿಯಾಗಿ ಹೇಳಿಕೆ ನೀಡುವ ಕಾಂಗ್ರೆಸ್ ಪಕ್ಷದ ನಾಯಕನೇ ಈ ಸಮಾರಂಭದಲ್ಲಿ ಭಾಗವಹಿಸಿದರೆ ತಪ್ಪು ಸಂದೇಶ ನೀಡಿದಂತಾಗುತ್ತದೆ ಎಂದು ನಾಯಕರು ವಾದಿಸುತ್ತಿದ್ದಾರೆ.
ಹಾಗಿದ್ದರೂ ಪ್ರಣಬ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದು, ಅವರ ಭಾಷಣ ಹೇಗಿರಬಹುದು ಎಂಬ ಕುತೂಹಲ ಇದೀಗ ಎಲ್ಲರಲ್ಲಿ ಮನೆ ಮಾಡಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.