ಶಾಲಾ-ಕಾಲೇಜುಗಳಲ್ಲಿ ಇನ್ಮುಂದೆ 10 ನಿಮಿಷ ಧ್ಯಾನ : ನಾಗೇಶ್
ಇನ್ನು ಮುಂದೆ ಶಾಲಾ-ಕಾಲೇಜುಗಳಲ್ಲಿ 10 ನಿಮಿಷ ವಿದ್ಯಾರ್ಥಿಗಳಿಗೆ ಧ್ಯಾನ ಮಾಡಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.
ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ಶಾಲಾ ಶಿಕ್ಷಣ ಸಚಿವ ಬಿ.ಸಿ. ನಾಗೇಶ್, ಧ್ಯಾನ ಮಾಡುವ ಸಂಬಂಧ ಆದೇಶ ಹೊರಡಿಸಲು ಸೂಚನೆ ನೀಡಿದ್ದಾರೆ.