108 ಅಂಬುಲೆನ್ಸ್ ಕರೆ ಸ್ವೀಕಾರ ಸೇವೆ ಪುನರಾರಂಭ

ಸೋಮವಾರ, 26 ಸೆಪ್ಟಂಬರ್ 2022 (10:18 IST)
ಬೆಂಗಳೂರು : ರಾಜ್ಯದ ಕೆಲವು ಜಿಲ್ಲೆಗಳಲ್ಲಿ 108 ಅಂಬುಲೆನ್ಸ್ ಕರೆ ಸ್ವೀಕಾರ ವ್ಯವಸ್ಥೆಯಲ್ಲಿ, ತಾಂತ್ರಿಕ ತೊಂದರೆಯಿಂದಾಗಿ, ವ್ಯತ್ಯಯ ಉಂಟಾಗಿತ್ತು. ಈಗ ಅದನ್ನು ಸರಿ ಪಡಿಸಲಾಗಿದ್ದು ಕರೆ ಸ್ವೀಕಾರ ಸೇವೆ ಪುನರಾರಂಭ ಗೊಂಡಿದೆ.

ಆದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ ತುರ್ತು ಸಂದರ್ಭದಲ್ಲಿ ಸಂಪರ್ಕ ಸಾಧಿಸಲು ಅನುಕೂಲವಾಗುವಂತೆ ಎಲ್ಲಾ ಜಿಲ್ಲೆಯ ಡಿಎಚ್ಒಗಳ ಹೆಚ್ಚುವರಿ ದೂರವಾಣಿ ಸಂಖ್ಯೆಗಳನ್ನು ಅಯಾ ಜಿಲ್ಲೆಯ ಜನರಿಗೆ ಒದಗಿಸುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ  ಟ್ವೀಟ್ ಮೂಲಕ ಸ್ಪಷ್ಟಪಡಿಸಿದೆ.

ಈ ಬಗ್ಗೆ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಟ್ವೀಟ್ ಮಾಡಿದ್ದು, 108 – ಆರೋಗ್ಯ ಕವಚ ಅಂಬುಲೆನ್ಸ್ ಸೇವೆಯಲ್ಲಿ ಉಂಟಾಗಿರುವ ತಾಂತ್ರಿಕ ಸಮಸ್ಯೆಯನ್ನು ಬಗೆಹರಿಸುವ ಮತ್ತು ಅಂಬುಲೆನ್ಸ್ ಸೇವೆಯಲ್ಲಿ ಯಾವುದೇ ಅಡಚಣೆಯಾಗದಂತೆ ತಾತ್ಕಾಲಿಕವಾಗಿ ಪರ್ಯಾಯ ವ್ಯವಸ್ಥೆ ಸ್ಥಾಪಿಸುವ ಕುರಿತಂತೆ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ವೀಡಿಯೋ ಕಾನ್ಫರೆನ್ಸ್ ಜರುಗಿತು.

ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಕೇಂದ್ರೀಕೃತ ಕಾಲ್ ಸೆಂಟರ್ ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಸಾರ್ವಜನಿಕರ ಕರೆಗೆ ಸ್ಪಂದಿಸಿ ಸೇವೆ ಒದಗಿಸಲಾಗುತ್ತಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ