ಖಾಸಗಿ ಶಾಲೆಗಳ ಬೋಧನಾ ಶುಲ್ಕ ಶೇ.15 ರಷ್ಟು ರಿಯಾಯಿತಿ : ಹೈಕೋರ್ಟ್

ಗುರುವಾರ, 16 ಸೆಪ್ಟಂಬರ್ 2021 (11:42 IST)
ಬೆಂಗಳೂರು : ಖಾಸಗಿ ಶಾಲೆಗಳ ಬೋಧನಾ ಶುಲ್ಕದಲ್ಲಿ ಶೇ. 15 ರಷ್ಟು ರಿಯಾಯಿತಿ ನೀಡುವಂತೆ ರಾಜ್ಯ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.

2020-21 ಸಾಲಿಗೆ ಬೋಧನಾ ಶುಲ್ಕದಲ್ಲಿ ಶೇ. 15 ರಷ್ಟು ರಿಯಾಯಿತಿ ನೀಡಬೇಕು ಎಂದು ಸುಪ್ರೀಂಕೋರ್ಟ್ ತೀರ್ಪಿನ ಅನುಸಾರ ರಾಜ್ಯ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
ರಾಜ್ಯ ಸರ್ಕಾರವು ಖಾಸಗಿ ಶಾಲೆಗಳ ಬೋಧಾನ ಶುಲ್ಕದಲ್ಲಿ ಶೇ. 70 ರಷ್ಟು ಶುಲ್ಕ ಸ್ವೀಕರಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದತ್ತು. ಇದೀಗ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರದ ಆದೇಶವನ್ನು ರದ್ದು ಪಡಿಸಿದ್ದು, ಇದೀಗ ಬೋಧನಾ ಶುಲ್ಕದಲ್ಲಿ 15 ರಷ್ಟು ರಿಯಾಯಿತಿ ಕೊಡಬೇಕು ಎಂದು ಹೈಕೋರ್ಟ್ ಆದೇಶ ನೀಡಿದೆ.
ಖಾಸಗಿ ಶಾಲೆಗಳ ಒಕ್ಕೂ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ರಾಜ್ಯ ಸರ್ಕಾರದ ಆದೇಶ ರದ್ದುಪಡಿಸಿದೆ. ಈ ಮೂಲಕ ಖಾಸಗಿ ಶಿಕ್ಷಣ ಸಂಸ್ಥೆಗಳು ಮತ್ತು ಪೋಷಕರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ