ರಾಜ್ಯದಲ್ಲಿ ಇನ್ನೂ 2 ದಿನ ಭಾರೀ ಮಳೆ
ಸೋಮವಾರ, 8 ಆಗಸ್ಟ್ 2022 (08:08 IST)
ರಾಜ್ಯದಲ್ಲಿ ಮಳೆಯ ಅಬ್ಬರ ನಿಲ್ಲೋ ಲಕ್ಷಣಗಳೇ ಕಾಣುತ್ತಿಲ್ಲ. ಎಲ್ಲಿ ನೋಡಿದ್ರು ಮಳೆ, ನೀರು ಕಂಡು ಜನರೇ ಬೇಸತ್ತು ಹೋಗಿದ್ದಾರೆ.
ಈ ಬಾರಿ ಮಳೆ ಸೃಷ್ಟಿ ಮಾಡಿರೋ ಅವಾಂತರ ಅಷ್ಟಿಷ್ಟಲ್ಲ. ಅನೇಕರು ಪ್ರಾಣ ಕಳೆದುಕೊಂಡಿದ್ರೆ ನೂರಾರು ಜನ ಮನೆ –ಮಠ ಕಳೆದುಕೊಂಡು ಬೀದಿಗೆ ಬಿದ್ದಿದ್ದಾರೆ.
ಇನ್ನೆರಡು ದಿನಗಳ ಕಾಲ ಭಾರೀ ಮಳೆಯಾಗೋ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 10 ಜಿಲ್ಲೆಗಳಿಗೆ ಮಳೆಯ ಅಲರ್ಟ್ ಘೋಷಣೆ ಮಾಡಲಾಗಿದೆ.
ಚಿಕ್ಕಮಗಳೂರು, ಕೊಡಗು, ಬೀದರ್, ಕಲಬುರ್ಗಿ, ವಿಜಯಪುರ, ಬೆಳಗಾವಿ, ಯಾದಗಿರಿ, ಬಾಗಲಕೋಟೆ, ಶಿವಮೊಗ್ಗ ಹಾಗೂ ಹಾಸನದಲ್ಲಿ ಭಾರೀ ಮಳೆಯಾಗೋ ಮುನ್ಸೂಚನೆ ನೀಡಲಾಗಿದೆ.