ಇಂದು ಭಾರೀ ಹಿಮಪಾತದಿಂದ 20 ಮಂದಿ ನಾಪತ್ತೆ!

ಬುಧವಾರ, 5 ಅಕ್ಟೋಬರ್ 2022 (07:52 IST)
ಡೆಹ್ರಾಡೂನ್ : ಉತ್ತರಾಖಂಡದ ದ್ರೌಪದಿ ಕಾ ದಂಡಾ-2 ಶಿಖರದಲ್ಲಿ ಇಂದು ಭಾರೀ ಹಿಮಪಾತ ಸಂಭವಿಸಿದ್ದು, 20ಕ್ಕೂ ಹೆಚ್ಚು ಪರ್ವತಾರೋಹಿಗಳು ಹಿಮದಲ್ಲಿ ಸಿಲುಕಿರುವುದಾಗಿ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ತಿಳಿಸಿದ್ದಾರೆ.

ವರದಿಗಳ ಪ್ರಕಾರ ನಾಪತ್ತೆಯಾದವರು ಉತ್ತರ ಕಾಶಿಯ ನೆಹರೂ ಇನ್ಸ್ಟಿಟ್ಯೂಟ್ ಆಫ್ ಮೌಂಟೇನಿಯರಿಂಗ್ನವರಾಗಿದ್ದಾರೆ. ಟ್ರೆಕ್ಕಿಂಗ್ ತೆರಳಿದ್ದ 40 ಜನರ ಗುಂಪಿನಲ್ಲಿ 22 ವಿದ್ಯಾರ್ಥಿಗಳು ಹಾಗೂ 7 ಮಂದಿ ಬೋಧಕರಿದ್ದರು.

ಹಿಮಪಾತ ಸಂಭವಿಸಿದಾಗ 29 ಮಂದಿ ಸಿಲುಕಿಕೊಂಡಿದ್ದರು. ಅವರಲ್ಲಿ 8 ಮಂದಿಯನ್ನು ರಕ್ಷಿಸಲಾಗಿದ್ದು, ಉಳಿದವರ ಪತ್ತೆಗೆ ರಕ್ಷಣಾ ತಂಡಗಳು ಕಾರ್ಯಾಚರಣೆ ನಡೆಸುತ್ತಿವೆ. ಜಿಲ್ಲಾಡಳಿತ, ಎನ್ಡಿಆರ್ಎಫ್, ಎಸ್ಡಿಆರ್ಎಫ್, ಸೇನೆ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ