ರಾಜ್ಯದಲ್ಲಿ 3ಕ್ಕೇರಿದ ಓಮಿಕ್ರಾನ್!
ಇಂದು ಮತ್ತೊಂದು ಓಮಿಕ್ರಾನ್ ಸೋಂಕು ಪ್ರಕರಣ ವರದಿಯಾಗಿದ್ದು, ರಾಜ್ಯದಲ್ಲಿ ಒಟ್ಟು ಸೋಂಕು ಪ್ರಕರಣಗಳ ಸಂಖ್ಯೆ 3ಕ್ಕೇರಿದೆ. ಡಿ.1ರಂದು ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಆಗಮಿಸಿದ್ದ 34 ವರ್ಷ ವಯಸ್ಸಿನ ವ್ಯಕ್ತಿಯಲ್ಲಿ ಓಮಿಕ್ರಾನ್ ಸೋಂಕು ಇರುವುದು ದೃಢಪಟ್ಟಿದೆ. ಈತ ಬೊಮ್ಮನಹಳ್ಳಿಯ ಅಂಜನಾಪುರ ನಿವಾಸಿಯಾಗಿದ್ದಾನೆ.
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಈತನಿಗೆ ಕೋವಿಡ್ ಪರೀಕ್ಷೆಗೆ ಒಳಪಡಿಸಿದಾಗ ನೆಗೆಟಿವ್ ಬಂದಿತ್ತು. ನಂತರ ಐಸೊಲೇಷನ್ನಲ್ಲಿದ್ದ ಈತನನ್ನು ಮತ್ತೆ ಪರೀಕ್ಷೆಗೆ ಒಳಪಡಿಸಿದಾಗ ಪಾಸಿಟಿವ್ ಬಂದಿದೆ. ನಂತರ ಈತನ ಮಾದರಿಯನ್ನು ಜಿನೋಮ್ ಸೀಕ್ವೆನ್ಸಿಂಗ್ಗೆ ಕಳುಹಿಸಿದಾಗ ಓಮಿಕ್ರಾನ್ ಇರುವುದು ಪತ್ತೆಯಾಗಿದೆ.