ದಸರಾ ರಜೆ ಬಳಿಕ ವಿಚಾರಣೆ : ಸಿಜೆಐ

ಶನಿವಾರ, 24 ಸೆಪ್ಟಂಬರ್ 2022 (14:13 IST)
ನವದೆಹಲಿ : ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಮುಂಬರುವ ದಸರಾ ರಜೆಯ ನಂತರ ವಿಚಾರಣೆಗೆ ಪಟ್ಟಿ ಮಾಡಲಾಗುವುದು ಎಂದು ಸುಪ್ರೀಂಕೋರ್ಟ್ ಹೇಳಿದೆ.

ಈ ಅರ್ಜಿಯನ್ನು ಇಂದು ಮುಖ್ಯ ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಅವರ ಮುಂದೆ ಪ್ರಸ್ತಾಪಿಸಲಾಯಿತು. ಇದಕ್ಕೆ ಪ್ರತಿಕ್ರಿಯಿಸಿದ ಅವರು, ದಸರಾ ವಿರಾಮದ ನಂತರ ಅದನ್ನು ಪಟ್ಟಿ ಮಾಡಲಾಗುವುದು ಎಂದು ತಿಳಿಸಿದರು.

ಅಕ್ಟೋಬರ್ 3 ರಿಂದ 10ರವರೆಗೂ ಒಂದು ವಾರದ ದಸರಾ ಹಬ್ಬದ ಹಿನ್ನೆಲೆ ಕೋರ್ಟ್ ರಜೆಯಲ್ಲಿರಲಿದೆ.  ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸುವ ಕೇಂದ್ರ ಸರ್ಕಾರದ ಆಗಸ್ಟ್ 2019ರ ನಿರ್ಧಾರವನ್ನು ಪ್ರಶ್ನಿಸಿ 20ಕ್ಕೂ ಹೆಚ್ಚು ಅರ್ಜಿಗಳು ಸುಪ್ರೀಂಕೋರ್ಟ್ನಲ್ಲಿ ಬಾಕಿ ಉಳಿದಿವೆ.

ಈ ವಿಧಿಯನ್ನು ರದ್ದುಪಡಿಸುವ ಮೂಲಕ ಕೇಂದ್ರವು ಜಮ್ಮು ಮತ್ತು ಕಾಶ್ಮೀರ ರಾಜ್ಯದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ