ದೋಣಿ ಮುಗುಚಿ 50 ಸಾವು; 60 ಪ್ರಯಾಣಿಕರು ನಾಪತ್ತೆ

ಭಾನುವಾರ, 10 ಅಕ್ಟೋಬರ್ 2021 (09:00 IST)
ಮಂಗೋಲಾ : ಡೆಮೊಕ್ರೆಟಿಕ್ ರಿಪಬ್ಲಿಕ್ ಆಫ್ ಕಾಂಗೋದಲ್ಲಿ ದೋಣಿ ಮುಗುಚಿ 50ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದು, 60 ಮಂದಿ ನಾಪತ್ತೆಯಾಗಿದ್ದಾರೆ.

ಈ ಘಟನೆ ಕಾಂಗೋ ನದಿಯಲ್ಲಿ ನಡೆದಿದ್ದು, ಇದುವರೆಗೂ 51 ಶವಗಳನ್ನು ಹೊರಗೆ ತೆಗೆಯಲಾಗಿದೆ. ಸ್ಥಳೀಯರು ಮತ್ತು ಪ್ರಯಾಣಿಕರ ಮಾಹಿತಿ ಮೇರೆಗೆ ಇನ್ನೂ 60 ಜನ ನಾಪತ್ತೆಯಾಗಿದ್ದು, ಶೋಧ ಕಾರ್ಯ ಮುಂದುವರಿದಿದೆ. 39 ಜನರು ಸುರಕ್ಷಿತವಾಗಿದ್ದು, ಆರೋಗ್ಯದಲ್ಲಿ ಏರುಪೇರು ಕಂಡು ಬಂದ ಪ್ರಯಾಣಿಕರನ್ನು ಪ್ರಥಮ ಚಿಕಿತ್ಸೆ ನೀಡಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಉತ್ತರ ಪಶ್ಚಿಮ ಪ್ರಾಂತ್ಯದ ಮಂಗೋಲಾ ಗವರ್ನರ್ ವಕ್ತಾರ ನೆಸ್ಟರ್ ಮೈಗ್ಬಾಡೋ ಹೇಳಿದ್ದಾರೆ.
ದೋಣಿ ಹೊರಡುವ ಸಿಬ್ಬಂದಿ ಪ್ರಯಾಣಿಕರನ್ನು ಸಂಖ್ಯೆಯನ್ನು ದಾಖಲು ಮಾಡಿಕೊಂಡಿರಲಿಲ್ಲ. ಹಾಗಾಗಿ ಪ್ರಯಾಣಿಕರ ಬಗ್ಗೆ ಸ್ಪಷ್ಟ ಮಾಹಿತಿ ಸಿಗುತ್ತಿಲ್ಲ. ನಿಮ್ಮ ಕುಟುಂಬಸ್ಥರು ಈ ಮಾರ್ಗವಾಗಿ ಪ್ರಯಾಣಿಸುತ್ತಿದ್ರೆ ಮಾಹಿತಿ ನೀಡಿ ಎಂದು ಸಾರ್ವಜನಿಕರಿಗೆ ಸೂಚನೆ ನೀಡಲಾಗಿದೆ. ದೋಣಿಯಲ್ಲಿ ಸಾಮಥ್ರ್ಯಕ್ಕಿಂತ ಹೆಚ್ಚಿನ ಜನರು ಪ್ರಯಾಣಿಸುತ್ತಿದ್ದರಿಂದ ದುರಂತ ಸಂಭವಿಸಿರುವ ಸಾಧ್ಯತೆಗಳಿವೆ. ಶೋಧ ಮತ್ತು ರಕ್ಷಣಾ ಕಾರ್ಯ ಮುಂದುವರಿದಿದೆ. ಹೆಚ್ಚು ಹೆಚ್ಚು ಜನರನ್ನು ಸುರಕ್ಷಿತವಾಗಿ ರಕ್ಷಿಸುವ ವಿಶ್ವಾಸ ಹೊಂದಿದ್ದೇವೆ ಎಂದು ನೆಸ್ಟರ್ ಮೈಗ್ವಾಡೋ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ದೋಣಿ ಮುಗುಚಿದ್ದು ಹೇಗೆ?
ದೋಣಿ ರಾತ್ರಿ ಮಗುಚಿದ್ದು, ಹವಾಮಾನ ವೈಪರೀತ್ಯದಿಂದಲೂ ದುರಂತ ಸಂಭವಿಸಿರುವ ಸಾಧ್ಯತೆಗಳಿವೆ. ಈ ಹಿನ್ನೆಲೆ ಶುಕ್ರವಾರ ರಾತ್ರಿ ಹವಾಮಾನದ ವರದಿಯನ್ನು ಅಧಿಕಾರಿಗಳು ಪಡೆದುಕೊಂಡಿದ್ದಾರೆ. ಮತ್ತೊಂದು ಕಾರಣ ಸಾಮಥ್ರ್ಯಕ್ಕಿಂತ ಹೆಚ್ಚಿನ ಜನರ ಪ್ರಯಾಣ. ಕೆಲವೊಮ್ಮೆ ಈ ಎರಡೂ ಕಾರಣಗಳಿಂದ ದೋಣಿ ದುರಂತಕ್ಕೆ ಒಳಗಾಗಿರುವ ಬಗ್ಗೆಯೂ ಅನುಮಾನಗಳು ವ್ಯಕ್ತವಾಗಿವೆ. ದೋಣಿಯಲ್ಲಿ ಎಷ್ಟು ಜನ ಪ್ರಯಾಣಿಸುತ್ತಿದ್ದರು ಎಂಬ ಮಾಹಿತಿಯನ್ನು ಶೀಘ್ರದಲ್ಲಿ ಹೇಳಲಾಗುತ್ತೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಪ್ರಾಂತೀಯ ಅಧಿಕಾರಿಗಳು ದುರಂತ ಹಿನ್ನೆಲೆ ಮೂರು ದಿನ ಶೋಕಾಚರಣೆ ಘೋಷಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ