5T ಸೂತ್ರ ಪ್ರಧಾನಿ ಮೆಚ್ಚುಗೆ: ಏನಿದು 5T ಸೂತ್ರ?

ಶುಕ್ರವಾರ, 14 ಜನವರಿ 2022 (06:38 IST)
ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ನಿಯಂತ್ರಣ ಹಾಗೂ ನಿರ್ವಹಣೆಗೆ ಅಳವಡಿಸಿರುವ ಟೆಸ್ಟಿಂಗ್, ಟ್ರಾಕಿಂಗ್, ಟ್ರೇಸಿಂಗ್, ಟ್ರಯಾಜಿಂಗ್ ಮತ್ತು ಟೆಕ್ನಾಲಜಿ ಬಳಕೆಯ 5ಟಿ ಸೂತ್ರವನ್ನು ಪ್ರಧಾನಮಂತ್ರಿಯವರು ಶ್ಲಾಘಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.
 
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ನಡೆಸಿದ ವೀಡಿಯೋ ಸಂವಾದದಲ್ಲಿ ಭಾಗವಹಿಸಿದ ನಂತರ ಪತ್ರಿಕಾ ಹೇಳಿಕೆ ನೀಡಿರುವ ಮುಖ್ಯಮಂತ್ರಿಗಳು, ರಾಜ್ಯದಲ್ಲಿ ಕೋವಿಡ್ ನಿಯಂತ್ರಣ ಹಾಗೂ ನಿರ್ವಹಣೆಗಾಗಿ ಕೈಗೊಂಡಿರುವ ಕ್ರಮಗಳನ್ನು ಪ್ರಧಾನಿಯವರಿಗೆ ವಿವರಿಸಲಾಯಿತು.

ಇದರೊಂದಿಗೆ ರಾಜ್ಯದಲ್ಲಿ ಆರೋಗ್ಯ ಮೂಲಸೌಕರ್ಯ ಅಭಿವೃದ್ಧಿಗೆ ಕೈಗೊಂಡಿರುವ ಕ್ರಮಗಳ ಕುರಿತು ಸಹ ಪ್ರಧಾನಿಯವರಿಗೆ ಮಾಹಿತಿ ನೀಡಲಾಯಿತು. ಹಾಗೂ ಆಕ್ಸಿಜನೇಟೆಡ್ ಬೆಡ್ಗಳು ಮತ್ತು ಆಕ್ಸಿಜನ್ ಪ್ಲಾಂಟ್ಗಳನ್ನು ಹೆಚ್ಚಿಸಲು ಕೇಂದ್ರದ ನೆರವು ಕೋರಲಾಯಿತು ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ